ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಕೇಳುವ ಹಕ್ಕಿದೆ: ರವಿಶಂಕರ್ ಪ್ರಸಾದ್

Last Updated 16 ನವೆಂಬರ್ 2019, 13:32 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿಯೊಬ್ಬರೂ ಕೇಳುವ ಹಕ್ಕನ್ನು ಹೊಂದಿದ್ದಾರೆ, ಕೇಳಲಿ ಎಂದು ಕೇಂದ್ರಸಚಿವ ರವಿಶಂಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಫೇಲ್ ಖರೀದಿ ಹಗರಣದ ಕುರಿತು ಜಂಟಿ ಸದನ ಸಮಿತಿ ರಚಿಸಬೇಕೆಂದು ಒತ್ತಾಯಿಸಿರುವುದರ ಕುರಿತು ಮೇಲಿನಂತೆ ಹೇಳಿದ್ದಾರೆ.

ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಪ್ರತಿಯೊಬ್ಬರೂ ಕೇಳುವ ಹಕ್ಕನ್ನು ಹೊಂದಿದ್ದಾರೆ. 2018ರಲ್ಲಿ ಸುಪ್ರೀಂಕೋರ್ಟ್ ತಿರಸ್ಕರಿಸಿದೆ, ಈ ಬಾರಿಯ ಚುನಾವಣೆಯಲ್ಲಿ ಮತದಾರರು ಇವರನ್ನು ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಕುರಿತು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಟ್ವೀಟ್ ಮಾಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೊಸೆಫ್ ತಮ್ಮ ತೀರ್ಪಿನಲ್ಲಿ ರಫೇಲ್ ಹಗರಣದ ಕುರಿತ ತನಿಖೆಗೆ ಹೊಸ ಅವಕಾಶವನ್ನು ಸೃಷ್ಟಿಸಿದ್ದಾರೆ. ಜಂಟಿ ಸದನ ಸಮಿತಿಯನ್ನು ತಕ್ಷಣವೇ ರಚಿಸಿ ಹಗರಣದ ತನಿಖೆ ನಡೆಸಬೇಕೆಂದುಒತ್ತಾಯಿಸಿದ್ದರು.

2018ರ ಡಿಸೆಂಬರ್ 14ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಕುರಿತು ಸಲ್ಲಿಸಲಾಗಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮೇಲ್ಮನವಿಗಳನ್ನು ತಿರಸ್ಕರಿಸಿ ತೀರ್ಪು ನೀಡಿದೆ. ಆದಾಗ್ಯೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ತಮ್ಮ ತೀರ್ಪಿನಲ್ಲಿ ರಫೇಲ್ ಯುದ್ಧವಿಮಾನ ಖರೀದಿ ಹಗರಣದಲ್ಲಿ ಸಿಬಿಐ ತನಿಖೆ ನಡೆಸಲು ಯಾವುದೇ ತಡೆ ಹಾಕುವುದಿಲ್ಲ ಎಂದು ತಿಳಿಸಿದ್ದಾರೆ.ಕಾಂಗ್ರೆಸ್ ಮುಖಂಡರೊಬ್ಬರು ಈ ವರ್ಷದ ಆರಂಭದಲ್ಲಿ ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT