ಇವಿಎಂ ದುರ್ಬಳಕೆ ಅಸಾಧ್ಯ: ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರ

7

ಇವಿಎಂ ದುರ್ಬಳಕೆ ಅಸಾಧ್ಯ: ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರ

Published:
Updated:

ಚಂಡೀಗಡ: ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ತಿರುಚಲು ಅಥವಾ ಅಕ್ರಮವೆಸಗಲು ಸಾಧ್ಯವಾಗದಂತಹ ವ್ಯವಸ್ಥೆ ಹೊಂದಿದ್ದು, ಅವುಗಳ ಕಾರ್ಯನಿರ್ವಹಣೆಯನ್ನು ಪರಿಣತರ ಸಮಿತಿ ನೋಡಿಕೊಳ್ಳುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರ ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಹ್ಯಾಕ್ ಮಾಡಬಹುದೇ?

ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ (ಪಿಜಿಐಎಂಇಆರ್‌) ಸ್ನಾತಕೋತ್ತರ ಪದವಿ ವಿಭಾಗದ ಹೊಸ ಶೈಕ್ಷಣಿಕ ಅಧಿವೇಶನ ಉದ್ಘಾಟಿಸಿ ಮಾತನಾಡಿದ ಅವರು, ಇವಿಎಂ ವ್ಯವಸ್ಥೆ ಯಾವುದೇ ಸಂಶಯಕ್ಕೆ ಎಡೆಮಾಡಿಕೊಡದ ರೀತಿಯಲ್ಲಿ ಪರಿಪೂರ್ಣವಾಗಿದೆ. ಅತ್ಯುನ್ನತವಾದ ತಾಂತ್ರಿಕ ಪರಿಣತರ ಸಮಿತಿ ಅವುಗಳ ಕಾರ್ಯನಿರ್ವಹಣೆಯನ್ನು ನೋಡಿಕೊಳ್ಳುತ್ತಿದೆ ಎಂದರು.

ಇದನ್ನೂ ಓದಿ: ಇವಿಎಂ: ‘ಸಾಂಸ್ಥಿಕ ಅಹಂ’ಗಳ ಬಲೆಯಲ್ಲಿ​

ಎವಿಎಂಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹಲವಾರು ರಾಜಕೀಯ ಪಕ್ಷಗಳು ಇತ್ತೀಚೆಗೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಂದ ಈ ಹೇಳಿಕೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !