ಸೋಮವಾರ, ಜೂನ್ 14, 2021
28 °C

 ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್‌ನ ಮಾಜಿ ಸಚಿವನಿಗೆ 7 ವರ್ಷ ಜೈಲು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ/ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಸಚಿವ ಅನೋಶ್‌ ಎಕ್ಕಾ ಅವರಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ  ಮತ್ತು ₹ 2 ಕೋಟಿ ದಂಡ ವಿಧಿಸಿ ರಾಂಚಿ ನ್ಯಾಯಾಲಯ ತೀರ್ಪು ನೀಡಿದೆ. 

ಪಿಎಂಎಲ್‌ಎ ವಿಶೇಷ ನ್ಯಾಯಾಧೀಶ ಅನಿಲ್ ಕುಮಾರ್ ಮಿಶ್ರಾ ಅವರು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದರು. ಪ್ರಕರಣದಲ್ಲಿ ಅನೋಶ್‌ ಎಕ್ಕಾ ದೋಷಿ ಎಂದು ಕಳೆದ ಮಾರ್ಚ್‌ 21 ರಂದು ಜಾರ್ಖಂಡ್ ಕೋರ್ಟ್‌ ಹೇಳಿತ್ತು. 

ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಕ್ಕಾ ಸಹ ಆರೋಪಿಯಾಗಿದ್ದರು. 

ಕೋಡಾ ಸಂಪುಟದಲ್ಲಿ ಎಕ್ಕಾ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಗರಣದ ತನಿಖೆ ಆರಂಭಿಸಿದ ಜಾರಿ ನಿರ್ದೇಶನಾಲಯ (ಇ.ಡಿ), ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು