ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚತಾರಾ ಹೊಟೇಲ್‌ ಬಳಿ ಗನ್‌ ಹಿಡಿದು ಬೆದರಿಕೆ ಹಾಕಿದ ಮಾಜಿ ಸಂಸದನ ಪುತ್ರ

Last Updated 16 ಅಕ್ಟೋಬರ್ 2018, 10:23 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಪ್ರಮುಖ ಪಂಚತಾರಾ ಹೊಟೇಲ್‌ ಹೊರಭಾಗದಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಗನ್‌ ಹಿಡಿದು ಓಡಾಡಿರುವ ವಿಡಿಯೊ ವೈರಲ್‌ ಆಗಿದೆ. ಆ ವ್ಯಕ್ತಿ ಮಾಜಿ ಸಂಸದರೊಬ್ಬರ ಪುತ್ರನೆಂದು ಪೊಲೀಸರು ಗುರುತಿಸಿದ್ದಾರೆ.

ಮೊಬೈಲ್‌ ಫೋನ್‌ನಲ್ಲಿ ಚಿತ್ರೀಕರಿಸಲಾಗಿರುವ 10 ಸೆಕೆಂಡ್‌ಗಳ ವಿಡಿಯೊದಲ್ಲಿ ದಾಖಲಾಗಿರುವಂತೆ ಗನ್‌ ಹಿಡಿದು ಓಡಾಡಿರುವ ವ್ಯಕ್ತಿ ಆಶಿಶ್‌ ಪಾಂಡೆ ಎಂದು ಗುರುತಿಸಲಾಗಿದೆ. ಮಹಿಳೆಯ ಮೇಲೆ ಕೂಗಾಡುತ್ತಿರುವ ಆಶಿಶ್‌ ಗನ್‌ ಹಿಡಿದು ಬೆದರಿಸುತ್ತಿರುವುದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಗಮನಿಸಬಹುದು. ಮತ್ತೊಬ್ಬ ಮಹಿಳೆ ಹಾಗೂ ಭದ್ರತಾ ಸಿಬ್ಬಂದಿ ಆತನನ್ನು ಸಮಾಧಾನ ಪಡಿಸುತ್ತಿರುವುದು ಸ್ಪಷ್ಟವಾಗಿದೆ.

ಅಕ್ಟೋಬರ್‌ 14ರಂದು ಹೊಟೇಲ್‌ನಲ್ಲಿ ಪಾರ್ಟಿ ಬಳಿಕ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಉತ್ತರ ಪ್ರದೇಶದ ಬಿಎಸ್‌ಪಿ ಮುಖಂಡ,ಮಾಜಿ ಸಂಸದ ರಾಕೇಶ್‌ ಪಾಂಡೆ ಅವರ ಪುತ್ರ ಆಶಿಶ್‌ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್‌ ಹೊರಡಿಸಿದ್ದಾರೆ. ವಿಡಿಯೊ ವೈರಲ್‌ ಆಗುತ್ತಿದ್ದಂತೆ ದೆಹಲಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT