ಸೋಮವಾರ, ಡಿಸೆಂಬರ್ 9, 2019
25 °C

ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಎಂಎಲ್ಎಗೆ 3 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್: ಪೊಲೀಸ್ ಠಾಣೆಗೆ ಬೆಂಕಿ ಇಡುವುದಾಗಿ ಬೆದರಿಕೆಯೊಡ್ಡಿದ್ದ ಮಾಜಿ ಶಾಸಕಿ ಹಾಗೂ ಅವರ ಏಳು ಮಂದಿ ಹಿಂಬಾಲಕರಿಗೆ ಇಲ್ಲಿನ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಇಲ್ಲಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುರೇಶ್ ಸಿಂಗ್ ಶನಿವಾರ ತೀರ್ಪು ನೀಡಿದ್ದು, ಕಾಂಗ್ರೆಸ್‌‌ ಮುಖಂಡರು ಹಾಗೂ ಮಧ್ಯಪ್ರದೇಶದ ಕರೇರಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಕಾಟಕಿ ಅವರಿಗೆ ₹5 ಸಾವಿರ ದಂಡ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶವನ್ನೂ ನ್ಯಾಯಾಲಯ ನೀಡಿದೆ.  2017ರಲ್ಲಿ ಪೊಲೀಸರು ಪ್ರತಿಭಟನಾ ನಿರತ ರೈತರ ಮೇಲೆ ಗುಂಡಿನ ದಾಳಿ ನಡೆಸುವುದರ ವಿರುದ್ಧ ಸಿಡಿದೆದ್ದ ಮಾಜಿ ಶಾಸಕಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. 

ಇದನ್ನೂ ಓದಿ: ಭೋಪಾಲ್‌ ದುರಂತ: ಹೊಸ ಸಾಕ್ಷ್ಯ ಲಭ್ಯ

ವಿನಾಸ್ ಗೋಯಲ್, ದೀಪಕ್ ಸೇಠ್, ನಾರಾಯಣ, ಬಂಟಿ ಅಲಿಯಾಸ್ ಸಂಜಯ್, ಸತೀಶ್ ವರ್ಮ, ಮನೀಶ್ ಕಾಟಿಕ್ ಶಿಕ್ಷೆಗೆ ಒಳಪಟ್ಟವರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು