ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆ

ಶುಕ್ರವಾರ, ಮೇ 24, 2019
29 °C

ಮಾಜಿ ಸಚಿವ ಬಿಜೆಪಿಗೆ ಸೇರ್ಪಡೆ

Published:
Updated:
Prajavani

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಕೇರಳದ ಕಾಂಗ್ರೆಸ್‌ ಮುಖಂಡ ಎಸ್‌. ಕೃಷ್ಣಕುಮಾರ್‌ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ.

80 ವರ್ಷದ ಕೃಷ್ಣಕುಮಾರ್‌ ಅವರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮುಖಂಡರಾದ ಅನಿಲ್‌ ಬಲೂನಿ ಮತ್ತು ಷಾನವಾಜ್‌ ಹುಸೇನ್‌ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ
ಗೊಂಡರು.

‘ಮೋದಿ ಅವರು ದೇಶದ ಅಭಿವೃದ್ಧಿಗೆ ದುಡಿಯುತ್ತಿದ್ದಾರೆ. ಅವರ ನಾಯಕತ್ವ ಮುಂದುವರಿಯಲಿದೆ‘ ಎಂದೂ ಕೃಷ್ಣಕುಮಾರ್‌ ಹೇಳಿದ್ದಾರೆ. 80 ಮತ್ತು 90ರ ದಶಕದಲ್ಲಿ ಇವರು ಮೂರು ಬಾರಿ ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !