ಎನ್‌ಆರ್‌ಸಿಯಲ್ಲಿ ಹೆಸರು ಇಲ್ಲದಿದ್ದರೂ ಮತದಾನದ ಹಕ್ಕು

7
ಚುನಾವಣಾ ಆಯೋಗ ಸ್ಪಷ್ಟನೆ

ಎನ್‌ಆರ್‌ಸಿಯಲ್ಲಿ ಹೆಸರು ಇಲ್ಲದಿದ್ದರೂ ಮತದಾನದ ಹಕ್ಕು

Published:
Updated:

ನವದೆಹಲಿ: ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ ಅಂತಿಮ ಕರಡು ಪಟ್ಟಿಯಲ್ಲಿ (ಎನ್‌ಆರ್‌ಸಿ) ಹೆಸರು ಇಲ್ಲದವರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ.

ಎನ್ಆರ್‌ಸಿ ಪಟ್ಟಿಯಲ್ಲಿ ಇಲ್ಲದವರ ಹೆಸರನ್ನು ಸಹಜವಾಗಿ ಮತದಾರರ ಪಟ್ಟಿಯಿಂದಲೂ ಕೈಬಿಡಲಾಗುತ್ತದೆ ಎಂಬ ವರದಿಗಳನ್ನು ಆಯೋಗ ತಳ್ಳಿ ಹಾಕಿದೆ.

ಎನ್‌ಆರ್‌ಸಿ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಮತದಾನದ ಹಕ್ಕಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್‌ ತಿಳಿಸಿದ್ದಾರೆ.

ಚುನಾವಣಾ ಕಾನೂನಿನ ಅನುಸಾರ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಅಥವಾ ಕೈಬಿಡುವ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಹೊರತು ಎನ್‌ಆರ್‌ಸಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿ ನೋಂದಣಿ ಮತ್ತು ಎನ್‌ಆರ್‌ಸಿ ಕರಡು ಸಿದ್ಧತೆ ಕಾರ್ಯ ಸ್ವತಂತ್ರವಾಗಿ ನಡೆಯುತ್ತವೆ. 1950ರ ಜನಪ್ರತಿನಿಧಿ ಕಾಯ್ದೆಯಲ್ಲಿ ಸೂಚಿಸಲಾದ ಮಾನದಂಡ ಮತ್ತು ಅರ್ಹತೆ ಆಧಾರದ ಮೇಲೆ ವ್ಯಕ್ತಿಯ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆ ಯಾಗುತ್ತದೆ ಎಂದು ವಿವರಿಸಿದ್ದಾರೆ.

ಗೊಂದಲಮಯ ಹೇಳಿಕೆ

ಮತದಾರರ ಪಟ್ಟಿ ಮತ್ತು ಎನ್‌ಆರ್‌ಸಿ ಪಟ್ಟಿ ನಡುವೆ ಯಾವುದೇ ಸಂಬಂಧ ಇಲ್ಲ ಎಂದು ರಾವತ್‌ ಹೇಳಿದ್ದಾರೆ. ಆದರೆ, 40 ಲಕ್ಷ ಮಂದಿಯ ಹೆಸರನ್ನು ಎನ್‌ಆರ್‌ಸಿಯಿಂದ ಕೈಬಿಡಲಾದ ಕಾರಣಗಳನ್ನು ಮುಂದಿನ ಒಂದು ತಿಂಗಳಲ್ಲಿ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ಪಟ್ಟಿಯಲ್ಲಿ ಹೆಸರು ಇಲ್ಲದವರು ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಅಹವಾಲು ಪರಿಶೀಲನೆ ಬಳಿಕ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಎನ್‌ಆರ್‌ಸಿ ಕರಡು ಬಿಡುಗಡೆ ನಂತರದಲ್ಲಿ ಅಸ್ಸಾಂನಲ್ಲಿ ನಡೆದ ಬೆಳವಣಿಗೆ ಕುರಿತು ಆ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯು ಸ್ಥಿತಿಗತಿ ವರದಿ ನೀಡಲಿದ್ದಾರೆ ಎಂದು ರಾವತ್‌ ತಿಳಿಸಿದ್ದಾರೆ.

**

ಕರಡು ಪಟ್ಟಿಯಲ್ಲಿ ಇಲ್ಲದವರ ಹೆಸರನ್ನು ಮತದಾರರ ಪಟ್ಟಿಯಿಂದಲೂ ಕೈಬಿಡಲಾಗುವುದು ಎಂಬುವುದು ಸುಳ್ಳು. ಈ ಬಗ್ಗೆ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ.

– ಒ.ಪಿ. ರಾವತ್‌,  ಮುಖ್ಯ ಚುನಾವಣಾ ಆಯುಕ್ತ

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !