ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ಕನಿಷ್ಠ 10 ಜನ ಸಾವು

Last Updated 31 ಆಗಸ್ಟ್ 2019, 8:18 IST
ಅಕ್ಷರ ಗಾತ್ರ

ಮುಂಬೈ:ಉತ್ತರ ಮಹಾರಾಷ್ಟ್ರದ ಧುಲೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ10 ಜನ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಶಿರ್‌ಪುರ ತಾಲ್ಲೂಕಿನ ವಾಘಡಿ ಗ್ರಾಮದಲ್ಲಿರುವ ಕಾರ್ಖಾನೆಯಲ್ಲಿ ಬೆಳಿಗ್ಗೆ 9.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 100 ಕಾರ್ಮಿಕರು ಅಲ್ಲಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕಾರ್ಖಾನೆಯಲ್ಲಿ ಸಿಲಿಂಡರ್‌ಗಳು ಸೋರಿಕೆಯಾಗಿದ್ದು ದುರ್ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈವರೆಗೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಶಿರ್‌ಪುರ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT