ಗುರುವಾರ , ಸೆಪ್ಟೆಂಬರ್ 23, 2021
26 °C

ಮಹಾರಾಷ್ಟ್ರದ ಮುಖ್ಯಮಂತ್ರಿ ಫಡಣವಿಸ್ ರಾಜೀನಾಮೆ ನೀಡಲಿ: ಶರದ್ ಪವಾರ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಗಡ್‌ಚಿರೋಲಿಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿ 15 ಪೊಲೀಸ್ ಮತ್ತು ಒಬ್ಬ ನಾಗರೀಕ ಹತ್ಯೆಯಾದ ಪ್ರಕರಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ರಾಜೀನಾಮೆ ನೀಡಲಿ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಒತ್ತಾಯಿಸಿದ್ದಾರೆ.

ಫಡಣವಿಸ್ ಅವರು ಗೃಹ ಇಲಾಖೆಯ ಜವಾಬ್ದಾರಿಯನ್ನೂ ಹೊತ್ತು ಕೊಂಡಿರುವುದರಿಂದ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಪವಾರ್ ಟ್ವೀಟ್ ಮಾಡಿದ್ದಾರೆ.

ನಿಮಗೆ ಮನಃಸಾಕ್ಷಿ ಇದ್ದರೆ ನೀವು ರಾಜೀನಾಮೆ ನೀಡಬೇಕು. ಆದರೆ ಈಗ ಅಧಿಕಾರದಲ್ಲಿ ಇರುವವರು ಈ ರೀತಿ ಮಾಡುವುದಿಲ್ಲ. 

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳು ಹೆಚ್ಚುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವುದರ ಬಗ್ಗೆ ಅಧಿಕಾರ ಹೊಂದಿದವರ ನಿರ್ಲಕ್ಷ್ಯ ಧೋರಣೆಯೇ ಇದಕ್ಕೆ ಕಾರಣ. ಹಾಗಾಗಿ ದಾಳಿಯನ್ನು ಖಂಡಿಸಿ, ಹುತಾತ್ಮರಿಗೆ ಸಂತಾಪ ಸೂಚಿಸುವುದನ್ನು ಬಿಟ್ಟರೆ ಬೇರೇನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪವಾರ್ ಹೇಳಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು