ಫೋನಿ ಚಂಡಮಾರುತದಿಂದ ಹಾನಿಯಾಗಿರುವ ರಾಜ್ಯಗಳಿಗೆ ₹1000 ಕೋಟಿ ಬಿಡುಗಡೆ

ಭಾನುವಾರ, ಮೇ 26, 2019
27 °C

ಫೋನಿ ಚಂಡಮಾರುತದಿಂದ ಹಾನಿಯಾಗಿರುವ ರಾಜ್ಯಗಳಿಗೆ ₹1000 ಕೋಟಿ ಬಿಡುಗಡೆ

Published:
Updated:

ನವದೆಹಲಿ: ಫೋನಿ ಚಂಡಮಾರುತದಿಂದ ಹಾನಿಯಾಗಿರುವ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮುಂಗಡವಾಗಿ ₹1000 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದೆ.

ಶುಕ್ರವಾರ ಫೋನಿ ಚಂಡಮಾರುತ ಪುರಿ ಸಮೀಪದ ಕರಾವಳಿ ತೀರ ಪ್ರವೇಶಿಸಿದ್ದು, ಇದರ ಆರ್ಭಟಕ್ಕೆ ಮೂವರು ಬಲಿಯಾಗಿದ್ದಾರೆ.

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚ್ಚೇರಿಯ ಸರ್ಕಾರ ಜತೆ ಸಂಪರ್ಕದಲ್ಲಿ ಇದೆ ಎಂದು ಹೇಳಿದ್ದಾರೆ.

ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಗುರುವಾರ ನಾನು ಅವಲೋಕನ ಸಭೆ ನಡೆಸಿದ್ದು, ಈ  ರಾಜ್ಯಗಳಿಗೆ ಮುಂಗಡವಾಗಿ  ₹1,000 ಕೋಟಿಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಿದ್ದೇವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಕರಾವಳಿ ರಕ್ಷಣಾ ಪಡೆ, ಸೇನೆ, ನೌಕಾದಳ ಮತ್ತು ವಾಯುದಳ ಆಡಳಿತ ಸಂಸ್ಥೆಗಳೊಂದಿಗೆ ಕಾರ್ಯ ನಿರತವಾಗಿದೆ. ಚಂಡಮಾರುತದಿಂದ ತತ್ತರಿಸಿ ಹೋಗಿರುವ ರಾಜ್ಯಗಳ ಜನರೊಂದಿಗೆ ಇಡೀ ದೇಶದ ಜನರು ಮತ್ತು ಕೇಂದ್ರ ಸರ್ಕಾರ ಇದೆ ಎಂದು ಮೋದಿ ಹೇಳಿದ್ದಾರೆ.

ಇದನ್ನು ಓದಿಒಡಿಶಾದಲ್ಲಿ ಫೋನಿ ಆರ್ಭಟಕ್ಕೆ 5 ಬಲಿ, ಸಾವಿರಾರು ಮರಗಳು ನಾಶ

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !