ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರತಿಭಟನೆ: ಒಡಿಶಾದಲ್ಲಿ ಜನಜೀವನ ಅಸ್ತವ್ಯಸ್ತ

Last Updated 21 ಫೆಬ್ರುವರಿ 2019, 20:03 IST
ಅಕ್ಷರ ಗಾತ್ರ

ಭುವನೇಶ್ವರ: ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವ ಕ್ರಮ ಖಂಡಿಸಿ ನವನಿರ್ಮಾಣ ಕೃಷಿಕ ಸಂಘಟನೆ(ಎನ್ಎನ್‌ಕೆಎಸ್‌) ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಗುರುವಾರ ಒಡಿಶಾ ರಾಜ್ಯದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ರೈತರ ಪ್ರತಿಭಟನೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲ ವ್ಯಕ್ತಪಡಿಸಿವೆ. ನಗರದಲ್ಲಿನ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು‌.‌‌

‌ಭುವನೇಶ್ವರದಲ್ಲಿ 70 ಮಂದಿ ಸೇರಿ ರಾಜ್ಯದ ಹಲವೆಡೆಯಿಂದ ಒಟ್ಟು 200 ರೈತರನ್ನು ಬಂಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭುವನೇಶ್ವರ ಮತ್ತು ಕಟಕ್ ನಗರದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸತ್ಯಜಿತ್ ಮಹಂತಿ ತಿಳಿಸಿದ್ದಾರೆ.

ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ನಿಗದಿ ಮಾಡಬೇಕು, ರೈತರಿಗೆ ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ಭತ್ಯೆಯಾಗಿ ಮಾಸಿಕ ₹ 5,000 ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಎನ್ಎನ್‌ಕೆಎಸ್‌ ಮುಖಂಡ ಅಕ್ಷಯ್‌ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT