ಮೋದಿಯನ್ನು ಹಿಟ್ಲರ್‌ಗೆ ಹೋಲಿಸಿದ ಫಾರೂಕ್

ಶುಕ್ರವಾರ, ಏಪ್ರಿಲ್ 26, 2019
24 °C

ಮೋದಿಯನ್ನು ಹಿಟ್ಲರ್‌ಗೆ ಹೋಲಿಸಿದ ಫಾರೂಕ್

Published:
Updated:
Prajavani

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. 

‘ಮೋದಿ ಅವರು ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಎಂದು ಹೇಳುತ್ತಾರೆ. ಹಿಟ್ಲರ್ ಕೂಡಾ ಜರ್ಮನಿಯಲ್ಲಿ ಅಂದು ಇಂಥದೇ ಮಾತನ್ನು ಹೇಳಿದ್ದ’ ಎಂದು ಫಾರೂಕ್ ಹೇಳಿದ್ದಾರೆ.

ಶ್ರೀನಗರದ ಹಳೆ ಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಬಲಿಯಾದರು. ಆದರೆ ಮೋದಿ ಬಾಲಾಕೋಟ್ ಬಾಲಾಕೋಟ್ ಬಾಲಾಕೋಟ್ ಎನ್ನುತ್ತಿದ್ದಾರೆ. ತನಿಖೆ ಬಗ್ಗೆ ಅವರು ಏಕೆ ಮಾತನಾಡುತ್ತಿಲ್ಲ’ ಎಂದು ಫಾರೂಕ್‌ ಪ್ರಶ್ನಿಸಿದ್ದಾರೆ.

‘ಪಾಕಿಸ್ತಾನದ ವಿರುದ್ಧ ಸುಳ್ಳು ಯುದ್ಧ ಪ್ರದರ್ಶಿಸಿ ಮೋದಿ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಬಿಜೆಪಿಯವರು ಬಾಲಾಕೋಟ್ ಹೆಸರಲ್ಲಿ ಬರೀ ಡೊಳ್ಳು ಬಾರಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ 370 ಹಾಗೂ 35ಎ ಕಲಂ ರದ್ದುಗೊಳಿಸಿದರೆ, ಅದರ ವಿರುದ್ಧ ಹೋರಾಡಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.  

ಬರಹ ಇಷ್ಟವಾಯಿತೆ?

 • 10

  Happy
 • 1

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !