ಗಂಗಾ ಉಳಿವಿಗಾಗಿ 109ದಿನ ಉಪವಾಸ ಸತ್ಯಾಗ್ರಹ ನಡೆಸಿದ್ದ ಶ್ರೀಜ್ಞಾನ ಸ್ವಾಮೀಜಿ ನಿಧನ

7

ಗಂಗಾ ಉಳಿವಿಗಾಗಿ 109ದಿನ ಉಪವಾಸ ಸತ್ಯಾಗ್ರಹ ನಡೆಸಿದ್ದ ಶ್ರೀಜ್ಞಾನ ಸ್ವಾಮೀಜಿ ನಿಧನ

Published:
Updated:

ನವದೆಹಲಿ: ಗಂಗಾ ನದಿ ಉಳಿವಿಗಾಗಿ ಸತತ 109 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶ್ರೀಜ್ಞಾನ ಸ್ವರೂಪ ಸಾನಂದ ಸ್ವಾಮೀಜಿ(ಜಿ. ಡಿ. ಅಗರ್ವಾಲ್‌), ಹೃಷಿಕೇಶದಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್‌) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸ್ವಾಮೀಜಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಖಚಿತಪಡಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಪ್ರೊಫೆಸರ್‌ ಆಗಿ ಕಾರ್ಯನಿರ್ವಹಿಸಿ ಬಳಿಕ ಸನ್ಯಾಸ ಸ್ವೀಕರಿಸಿದ್ದ ಸ್ವಾಮೀಜಿ, ತಮ್ಮ ಬದುಕನ್ನು ನದಿ ರಕ್ಷಣೆ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು.

ಇದನ್ನೂ ಓದಿ: ಗಂಗೆಯನ್ನು ಕಟ್ಟಿ ಹಾಕುವಿರೇಕೆ?

ಇವರ ಪೂರ್ವದ ಹೆಸರು ಜಿ. ಡಿ. ಅಗರ್ವಾಲ್‌. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಬೇಕಾಬಿಟ್ಟಿ ಅಣೆಕಟ್ಟುಗಳನ್ನು ನಿರ್ಮಿಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೂನ್‌ 22ರಿಂದಲೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸ್ವಾಮೀಜಿಯ ಆರೋಗ್ಯ ಗಂಭೀರ ಸ್ಥಿತಿ ತಲುಪಿತ್ತು. ಹೀಗಾಗಿ ಅವರನ್ನು ಹೃಷಿಕೇಶದ ಎಐಐಎಂಎಸ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. 

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 2

  Sad
 • 0

  Frustrated
 • 1

  Angry

Comments:

0 comments

Write the first review for this !