ಪರಮ್‌ಹಂಸ್‌ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲು

7
ರಾಮಮಂದಿರಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ

ಪರಮ್‌ಹಂಸ್‌ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲು

Published:
Updated:

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ಅಮರಣಾಂತ ಉಪವವಾಸ ಸತ್ಯಾಗ್ರಹ ನಡೆಸುತ್ತಿದ್ದ ಮಹಾಂತ್‌ ಪರಮ್‌ಹಂಸ್‌ ಅವರನ್ನು ಭಾನುವಾರ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರದ ಈ ಕ್ರಮವನ್ನು ಸಂತರು ತೀವ್ರವಾಗಿ ಖಂಡಿಸಿದ್ದಾರೆ.

ಇಲ್ಲಿನ ತಪಸ್ವಿ ಛವ್ನಿ ಮಠದ ಮುಖ್ಯಸ್ಥರಾದ ಮಹಾಂತ್ ಪರಮ್‌ಹಂಸ್‌ ಅವರು ಕಳೆದ ಸೋಮವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಅವರ ಆರೋಗ್ಯ ಬಿಗಡಾಯಿಸಿದ ಕಾರಣ, ಭಾನುವಾರ ರಾತ್ರಿ ಉಪವಾಸ  ನಡೆಸುತ್ತಿದ್ದ ಸ್ಥಳಕ್ಕೆ ಬಂದ ಪೊಲೀಸರು ಬಲವಂತವಾಗಿ ಕರೆದೊಯ್ದರು. ನಂತರ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ‘ಆರೋಗ್ಯ ಸ್ಥಿರವಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ. 

ಮಹಾಂತ್‌ ಅವರು ಯಾವುದೇ ವ್ಯಕ್ತಿಗಳನ್ನು ಭೇಟಿಯಾಗದಂತೆ ನಿರ್ಬಂಧಿಸಲಾಗಿದೆ. ಅಲ್ಲದೇ ತುರ್ತು ಚಿಕಿತ್ಸಾ ವಿಭಾಗದ ಹೊರಭಾಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿ, ಪರಮ್‌ಹಂಸ್‌ ಅವರು ಆಹಾರ ಸೇವಿಸಲು ನಿರಾಕರಿಸಿದ್ದಾರೆ. ಇದರಿಂದ ಇವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸುವ ಅಪಾಯ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ.

ಬರ್ಬರ ನಡವಳಿಕೆ: ‘ಧರಣಿ ನಡೆಸುತ್ತಿದ್ದವರನ್ನು ಏಕಾಏಕಿ ಹೊತ್ತೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಪೊಲೀಸರು ಬರ್ಬರವಾಗಿ ನಡೆದುಕೊಂಡಿದ್ದಾರೆ’ ಎಂದು ಕೆಲವು ಸಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ತಿಳಿದ ಬೆನ್ನಲ್ಲೇ, ವಿಶ್ವ ಹಿಂದು ಪರಿಷತ್‌ನ ಮಾಜಿ ‍ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ತೊಗಾಡಿಯಾ ಅವರು ಅಯೋಧ್ಯೆಯತ್ತ ಹೊರಟಿದ್ದು, ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಷ್ಟ್ರವ್ಯಾಪಿ  ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಶ್ರೀರಾಮನ ದೇವಸ್ಥಾನವನ್ನು ಸ್ಥಳಾಂತರಿಸುವ ಸಂಬಂಧ ಅಯೋಧ್ಯೆಯಲ್ಲಿರುವ ರಾಮಲಲ್ಲಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪೂಜೆ ಸಲ್ಲಿಸಬೇಕು ಎಂದು ಮಹಾಂತ ಅವರು ಬೇಡಿಕೆ ಇಟ್ಟಿದ್ದರು. ಬಿಜೆಪಿಯ ಅನೇಕ ಮುಖಂಡರು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರೂ, ಮಾತುಕತೆ ಫಲಪ್ರದವಾಗಿರಲಿಲ್ಲ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !