ಬುಧವಾರ, ಜುಲೈ 15, 2020
22 °C

ಕೊರೊನಾ ಹೋರಾಟಗಾರರಿಗೆ ಸೇನಾ ಗೌರವ: ಬಿಪಿನ್‌ ರಾವತ್

ಪಿಟಿಐ Updated:

ಅಕ್ಷರ ಗಾತ್ರ : | |

ವದೆಹಲಿ: ‘ವೈಮಾನಿಕ ಪ್ರದರ್ಶನ, ಹಡಗುಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸುವ ಜೊತೆಗೆ ಆಸ್ಪತ್ರೆಗಳ ಮೇಲೆ ಪುಷ್ಪವೃಷ್ಟಿ ಮೂಲಕಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೇವಕರಿಗೆ ಸೇನೆ ಗೌರವ ಸಲ್ಲಿಸಲಿದೆ’ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್ ತಿಳಿಸಿದ್ದಾರೆ. 

ಸೇನೆಯ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ, ನೌಕಾಪಡೆಯ ಮುಖ್ಯಸ್ಥ ಚೀಫ್‌ ಅಡ್ಮಿರಲ್‌ ಕರಂಬೀರ್‌ ಸಿಂಗ್, ‌ವಾಯುಪಡೆಯ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ‌ ಶುಕ್ರವಾರ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು. 

‘ಯುದ್ಧ ವಿಮಾನಗಳ ಮೂಲಕ ಮೇ 3 ರಂದು ಸಂಜೆ ಶ್ರೀನಗರದಿಂದ ತಿರುವನಂತಪುರದವರೆಗೆ, ದಿಬ್ರೂಗರ್‌ನಿಂದ ಕಛ್‌ವರೆಗೆ ವೈಮಾನಿಕ ಪ್ರದರ್ಶನದ ಮೂಲಕ ಗೌರವ ವಂದನೆ ಸಲ್ಲಿಸಲಾಗುವುದು. ನಮ್ಮನ್ನು ಸುರಕ್ಷಿತವಾಗಿಡಲು ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸುತ್ತಿದ್ದೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು