ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವರ್ಕರ್‌ ಕುರಿತು ಅವಹೇಳನ: ಮ್ಯಾಗ್ಸೆಸೆ ಪುರಸ್ಕೃತ ಪಾಂಡೆ ವಿರುದ್ಧ ಎಫ್‌ಐಆರ್‌

Last Updated 22 ಜನವರಿ 2020, 19:31 IST
ಅಕ್ಷರ ಗಾತ್ರ

ಅಲಿಗಡ: ವೀರ ಸಾವರ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಸಂದೀಪ್‌ ಪಾಂಡೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಭಾನುವಾರ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಾವರ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಸಿವಿಲ್‌ ಲೈನ್ಸ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.ಈ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT