ಭಾನುವಾರ, ಏಪ್ರಿಲ್ 5, 2020
19 °C

ಸಾಮಾಜಿಕ ಜಾಲತಾಣಗಳ ವಿರುದ್ಧ ‘ದೇಶದ್ರೋಹ‘ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ದೇಶದ್ರೋಹಿ ಚಟುವಟಿಕೆಗಳಿಗೆ ವಾಟ್ಸ್‌ಆ್ಯಪ್‌, ಟ್ವಿಟರ್‌ ಮತ್ತು ಟಿಕ್‌ಟಾಕ್‌ ವೇದಿಕೆ ನೀಡುತ್ತಿದೆ ಎಂದು ಆರೋಪಿಸಿ ಹೈದರಾಬಾದ್‌ ಮೂಲದ ವ್ಯಕ್ತಿಯೊಬ್ಬರು ಇಲ್ಲಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. 

ಶ್ರೀಶಾಲಿಮಾ ಎಂಬವರ ದೂರಿನ ಅನ್ವಯ ಸೈಬರ್‌ ಅಪರಾಧ ದಳದ ಪೊಲೀಸರು ವಾಟ್ಸ್‌ಆ್ಯಪ್‌, ಟ್ವಿಟರ್‌ ಮತ್ತು ಟಿಕ್‌ಟಾಕ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದೂರಿನಲ್ಲಿ ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್‌, ಟ್ವಿಟರ್‌ ಮತ್ತು ಟಿಕ್ಟಾಟ್‌ಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಹೇಳಿಕೆಯನ್ನು ಉಲ್ಲೇಖಿಸಲಾಗಿತ್ತು ಎಂದು ಡಿಸಿಪಿ ರಘುವೀರ್ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹಿಂಸಾಚಾರಕ್ಕೆ ಈ ಸಾಮಾಜಿಕ ಜಾಲತಾಣಗಳು ವೇದಿಕೆ ಒದಗಿಸುತ್ತವೆ ಎಂದು ಅವರು ಆರೋಪಿಸಿದ್ದಾರೆ. ಇದು ರಾಷ್ಟ್ರೀಯ ಭಾವೈಕ್ಯತೆಗೆ ಮಾರಕವಾಗಿದೆ ಎಂದು ಅವರು ಹೇಳಿದ್ದಾರೆ.

ಐಟಿ ಕಾಯ್ದೆಯ ಅಡಿಯಲ್ಲಿ ವಾಟ್ಸ್‌ಆ್ಯಪ್‌, ಟ್ವಿಟರ್‌ ಮತ್ತು ಟಿಕ್ಟಾಟ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹೈದರಾಬಾದ್ ಸೈಬರ್‌ ಅಪರಾಧ ದಳದ ಡಿಸಿಪಿ ರಘುವೀರ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು