ಸೋಮವಾರ, ಸೆಪ್ಟೆಂಬರ್ 27, 2021
22 °C

ಲಾಕ್‌ಡೌನ್‌ ನಡುವೆಯೂ ಹುಟ್ಟುಹಬ್ಬ ಆಚರಣೆ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮುಂಬೈ: ಲಾಕ್‌ಡೌನ್‌ ನಡುವೆಯೂ ಜನರನ್ನು ಗುಂಪು ಸೇರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಾರ್ಧಾ ಜಿಲ್ಲೆಯ ಬಿಜೆಪಿ ಶಾಸಕ ದಾದಾರಾವ್‌ ಕೆಚೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಭಾನುವಾರ ಸುಮಾರು 200 ಜನರು ಇವರ ನಿವಾಸದ ಎದುರು ಗುಂಪು ಸೇರಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

‘ಯಾರನ್ನು ಮನೆಗೆ ಕರೆದಿರಲಿಲ್ಲ. ಪ್ರತಿವರ್ಷ ಹುಟ್ಟುಹಬ್ಬದಂದು ಬಡವರಿಗೆ ಪಡಿತರ ವಿತರಿಸುತ್ತೇನೆ. ಈ ಬಾರಿ 21 ಕುಟುಂಬಕ್ಕೆ ದಿನಸಿ ನೀಡುವ ಯೋಜನೆ ಇತ್ತು. ನಾನು ಎಲ್ಲರಿಗೂ ಉಚಿತ ದಿನಸಿ ನೀಡುತ್ತಿದ್ದೇನೆ ಎಂದು ಪ್ರತಿಪಕ್ಷಗಳು ಪಿತೂರಿ ನಡೆಸಿ, ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಜನರು ಸೇರಿದ್ದರು’ ಎಂದು ಶಾಸಕರು ತಿಳಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ
ವಾದ್ರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು