ಗುರುವಾರ , ಜುಲೈ 29, 2021
23 °C

ದೆಹಲಿಯ ಕೊಳೆಗೇರಿಗೆ ಬೆಂಕಿ; 200 ಗುಡಿಸಲು ಭಸ್ಮ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯ ತುಘಲಕಾಬಾದ್‌ ಪ್ರದೇಶದಲ್ಲಿರುವ ಕೊಳೆಗೇರಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 200ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿದೆ.

ಬುಧವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ನೂರಾರು ಜನರು ಆಶ್ರಯ ಕಳೆದುಕೊಂಡಿದ್ದಾರೆ. ಆದಾಗ್ಯೂ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಮುಂದುವರಿಸಿವೆ.

ಈ ಬಗ್ಗೆ ಮಾತನಾಡಿರುವ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ಎಸ್‌ಕೆ ದುವಾ, ‘ಮಧ್ಯರಾತ್ರಿ 1.31ಕ್ಕೆ ಈ ಸಂಬಂಧ ಒಂದು ಕರೆ ಬಂತು. ಕೂಡಲೇ 20 ಅಗ್ನಿಶಾಮಕ ವಾಹನಗಳನ್ನು ಕಳುಹಿಸಿಕೊಡಲಾಯಿತು. 3 ಗಂಟೆ ಸುಮಾರಿಗೆ ಬೆಂಕಿ ನಿಯಂತ್ರಣಕ್ಕೆ ತರಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.

ಈ ಮೊದಲು ಮೇ 26 ರಂದು ಸಿಲಿಂಡರ್ ಸ್ಫೋಟಗೊಂಡು ಇದೇ ಪ್ರದೇಶದಲ್ಲಿ ನೂರಾರು ಗುಡಿಸಲುಗಳು ಸುಟ್ಟುಹೋಗಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು