ಗುರುವಾರ , ಫೆಬ್ರವರಿ 27, 2020
19 °C

ಮುಂಬೈ | ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ನವಿ ಮುಂಬೈನ ಸೀವುಡ್ಸ್‌ ಡರೇವ್‌ನಲ್ಲಿರುವ 21 ಅಂತಸ್ತಿನ ಕಟ್ಟಡವೊಂದರ ಮೇಲಿನ ಎರಡು ಮಹಡಿಗಳಲ್ಲಿ ಶನಿವಾರ ಬೆಳಗ್ಗೆ ಅಗ್ನಿ ದುರಂತ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇಲ್ಲಿನ ಪಾಲಂ ಬೀಚ್‌ನ 36ನೇ ವಲಯದ ಬಳಿ ಇರುವ ಸೀ ಹೋಮ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಳಗ್ಗೆ 6.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ.  ಆರು ಅಗ್ನಿಶಾಮಕ ವಾಹನಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ.

‘ಯಾವುದೇ ಪ್ರಾಣಾಪಾಯವಿಲ್ಲ. ಆದರೆ, ಬೆಂಕಿ ಹಾರಿಸುವ ಕಾರ್ಯ ಇನ್ನೂ ಮುಂದುವರಿದಿದೆ’ ಎಂದು ನೆರುಲ್‌ ಫೈರ್ ಬ್ರಿಗೇಡ್‌ ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು