ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಂಪಲ್ಲಿ ಎಕ್ಸಿಬಿಷನ್ ಗ್ರೌಂಡ್‍ನಲ್ಲಿ ಅಗ್ನಿ ಅನಾಹುತ: 7 ಮಂದಿಗೆ ಗಾಯ

Last Updated 30 ಜನವರಿ 2019, 17:55 IST
ಅಕ್ಷರ ಗಾತ್ರ

ಹೈದರಾಬಾದ್: ಇಲ್ಲಿನ ನಾಂಪಲ್ಲಿ ಎಕ್ಸಿಬಿಷನ್ ಗ್ರೌಂಡ್‍ನಲ್ಲಿ ಬುಧವಾರ ಸಂಜೆ ಅಗ್ನಿ ಅನಾಹುತ ಸಂಭವಿಸಿದ್ದು ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ 13 ವಾಹನಗಳು ಘಟನಾ ಸ್ಥಳಕ್ಕೆ ತಲುಪಿವೆ.

ಬೆಂಕಿ ಹಬ್ಬಿಕೊಳ್ಳುತ್ತಿದ್ದಂತೆ ಅಲ್ಲಿದ್ದ ಜನರು ಪ್ರಾಣ ಭಯದಿಂದ ಓಡಿದಾಗ ಕಾಲ್ತುಳಿತದಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಆಲ್ ಇಂಡಿಯಾ ಇಂಡಸ್ಟ್ರಿಯಲ್ ಎಕ್ಸಿಬಿಷನ್ ಸ್ಟಾಲ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಇದು ಇತರ ಸ್ಟಾಲ್‍ಗಳಿಗೂ ಹಬ್ಬಿಕೊಂಡಿತು.ಶಾರ್ಟ್ ಸರ್ಕ್ಯೂಟ್ ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗಿದೆ,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT