ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಬ್ಯಾಂಕ್ ಆಫ್ ಬಹ್ರೇನ್‌ನಲ್ಲಿ ಬೆಂಕಿ

Last Updated 25 ಜೂನ್ 2020, 6:58 IST
ಅಕ್ಷರ ಗಾತ್ರ

ಮುಂಬೈ: ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಬ್ಯಾಂಕ್ ಆಫ್ ಬಹ್ರೇನ್ ಮತ್ತು ಕುವೈತ್ ಕಚೇರಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದರು.

ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ. ಬೆಳಿಗ್ಗೆ 5.15ರ ಸುಮಾರಿಗೆ 15 ಅಂತಸ್ತಿನ ಜಾಲಿ ಮೇಕರ್ ಚೇಂಬರ್ ಕಟ್ಟಡದ ನೆಲ ಮಹಡಿಯಲ್ಲಿರುವ ಬ್ಯಾಂಕಿನ ಕಚೇರಿ ಮತ್ತು ಸರ್ವರ್‌ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ, ಬೆಂಕಿ ನಂದಿಸುವಲ್ಲಿ ಸಫಲವಾಗಿದೆ. ಘಟನೆಯಲ್ಲಿಕಂಪ್ಯೂಟರ್‌, ದಾಖಲೆ ಪತ್ರಗಳು, ಯುಪಿಎಸ್‌ ಬ್ಯಾಟರಿ ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT