ಮಂಗಳವಾರ, ಆಗಸ್ಟ್ 20, 2019
25 °C

ಮುಂಬೈ: ಮಹಾನಗರ ಟೆಲಿಫೋನ್‌ ನಿಗಮದ ಕಟ್ಟಡದಲ್ಲಿ ಬೆಂಕಿ ಅವಘಡ

Published:
Updated:

ಮುಂಬೈ (ಮಹಾರಾಷ್ಟ್ರ): ಇಲ್ಲಿನ ಬಾಂದ್ರದಲ್ಲಿನ ನಾಲ್ಕು ಅಂತಸ್ತಿನ ಮಹಾನಗರ ಟೆಲಿಫೋನ್‌ ನಿಗಮದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ.

ಬೆಂಕಿ ಕಾಣಿಸಿಕೊಂಡಿರುವ ಮಹಡಿಯಲ್ಲಿ ಸುಮಾರು 100 ಮಂದಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 14 ಅಗ್ನಿಶಾಮಕ ವಾಹನಗಳು ಬೆಂಕಿ ಆರಿಸುತ್ತಿದ್ದು, ಇಲ್ಲಿಯವರೆಗೆ ಯಾವುದೇ ಅನಾಹುತ ಸಂಭವಿಸಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Post Comments (+)