ಸೋಮವಾರ, ಜನವರಿ 20, 2020
29 °C

ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ ಅಗ್ನಿಶಾಮಕ ದಳದ ಸಿಬ್ಬಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯ ಉದ್ಯೋಗ ನಗರ ಪ್ರದೇಶ ಪೀರಾಗರಿ ಬ್ಯಾಟರಿ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಅಗ್ನಿಶಾಮಕ ದಳದ ಒಬ್ಬ ಸಿಬ್ಬಂದಿ ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. ಅದರಲ್ಲಿ ಅಗ್ನಿಶಾಮಕ ದಳದ 13ಕ್ಕೂ ಹೆಚ್ಚು ಸಿಬ್ಬಂದಿ ಸೇರಿದ್ದಾರೆ.

‘ಬೆಂಕಿ ಅವಘಡದ ಮಾಹಿತಿ ಮುಂಜಾನೆ 4.23ಕ್ಕೆ ಬಂದ ಕೂಡಲೇ ಅಗತ್ಯ ಸಿಬ್ಬಂದಿಯನ್ನು ಬೆಂಕಿ ನಂದಿಸಲು ನಿಯೋಜಿಸಲಾಗಿತ್ತು. ಎರಡು ಮಹಡಿಯ ಕಟ್ಟಡದಲ್ಲಿ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾಗ ಕಟ್ಟಡದ ಬಹುತೇಕ ಭಾಗ ಕುಸಿದಿದ್ದರಿಂದ ಕೆಲ ಸಿಬ್ಬಂದಿ ಅಲ್ಲಿಯೇ ಸಿಲುಕುವಂತಾಗಿತ್ತು’ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ದುರಂತದಲ್ಲಿ

ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಜನರನ್ನು ಬೆಂಕಿಯಿಂದ ರಕ್ಷಿಸುವ ವೇಳೆ ನಮ್ಮ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್‌ ಟ್ವೀಟ್‌ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು