ಭಾನುವಾರ, ಏಪ್ರಿಲ್ 5, 2020
19 °C

ಆಂಧ್ರ ಪ್ರದೇಶ: ಇಟಲಿಯಿಂದ ಬಂದ ವ್ಯಕ್ತಿಗೆ ಕೋವಿಡ್ 19 ಸೋಂಕು ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

covid 19

ಹೈದರಾಬಾದ್: ಇಟಲಿಯಿಂದ ಬಂದ 24ರ ಹರೆಯದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ಸೋಂಕು ಬಾಧಿಸಿರು ಶಂಕೆ ಇದೆ ಎಂದು ಹೇಳಲಾಗಿದೆ.

ಆಂಧ್ರ ಪ್ರದೇಶದ ಆರೋಗ್ಯ ಸಂಸ್ಥೆಗಳ ಪ್ರಕಾರ ಇಟಲಿಯಿಂದ ಬಂದ ಈ ವ್ಯಕ್ತಿಯಲ್ಲಿ ಕೋವಿಡ್ 19 ರೋಗ ಲಕ್ಷಣಗಳು ಕಂಡು ಬಂದಿದ್ದು ನೆಲ್ಲೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವ್ಯಕ್ತಿಯ ರಕ್ತದ ಮಾದರಿಯನ್ನು ಎಸ್‌ವಿಐಎಂಎಸ್ ತಿರುಪತಿಯಲ್ಲಿ ಪರೀಕ್ಷಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ. ಇನ್ನು ಹೆಚ್ಚಿನ ಪರೀಕ್ಷೆಗಾಗಿ ಮಾದರಿಯನ್ನು ಪುಣೆಯ ಎನ್‌ಐವಿಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ 10 ಪ್ರಕರಣ ಪತ್ತೆ
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಬಾಧಿಸಿದೆ ಎನ್ನಲಾಗುತ್ತಿರುವ 10 ಪ್ರಕರಣಗಳು ಪತ್ತೆಯಾಗಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿದ್ದಾರೆ. ಈ ಪೈಕಿ ಪುಣೆಯಲ್ಲಿ 8 ಪ್ರಕರಣಗಳಲ್ಲಿ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು