ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉದ್ಯಮ ವಲಯವನ್ನು ಉತ್ತೇಜಿಸಲು ಕಾಶ್ಮೀರ ಕಣಿವೆಯಲ್ಲಿ ಮೇ 25 ಹಾಗೂ 26ರಂದು ನಡೆಸಲು ಉದ್ದೇಶಿಸಿದ್ದ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ದೇಶದಾದ್ಯಂತ ಕೊರೊನಾ ಸೋಂಕು ಭೀತಿ ಇರುವುದರಿಂದ ಬೃಹತ್ ಪ್ರಮಾಣದ ಹೂಡಿಕೆದಾರರ ಸಭೆಯನ್ನು ಆಯೋಜಿಸುವುದು ಕಷ್ಟ. ದೇಶವು ಸಹಜಸ್ಥಿತಿಗೆ ಮರಳಿದ ನಂತರ ಹಾಗೂ ಕೈಗಾರಿಕಾ ಚಟುವಟಿಕೆ ಆರಂಭಗೊಂಡ ನಂತರ ಸಭೆಯ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಎಂ.ಕೆ.ದ್ವಿವೇದಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ಪ್ರದೇಶವನ್ನು ಗುರುತಿಸಲು ಉದ್ಯಮಿಗಳಿಗೆ ಸಭೆ ಮುಂದೂಡಿಕೆಯಿಂದ ಅನುಕೂಲವಾಗಲಿದೆ. ಕಣಿವೆ ಪ್ರದೇಶದಲ್ಲಿವಾಣಿಜ್ಯ ವ್ಯವಹಾರ ಚಟುವಟಿಕೆ ಆರಂಭಿಸಲು ಮತ್ತಷ್ಟು ಕಾಲಾವಕಾಶ ಸಿಕ್ಕಂತಾಗಿದೆ ಎಂದು ದ್ವಿವೇದಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.