ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ–2 ಕ್ಷಿಪಣಿ ಪರೀಕ್ಷಾರ್ಥ ರಾತ್ರಿ ಉಡಾವಣೆ ಯಶಸ್ವಿ

Last Updated 16 ನವೆಂಬರ್ 2019, 22:02 IST
ಅಕ್ಷರ ಗಾತ್ರ

ಬಾಲೇಶ್ವರ (ಒಡಿಶಾ):ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯುವ ಸಾಮರ್ಥ್ಯವಿರುವ ಅಗ್ನಿ–2 ಕ್ಷಿಪಣಿಯನ್ನು ಇದೇ ಮೊದಲ ಬಾರಿ ರಾತ್ರಿಯಲ್ಲಿ ಪರೀಕ್ಷಾರ್ಥವಾಗಿ ಉಡಾಯಿಸಲಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.

2,000 ಕಿ.ಮೀ. ದೂರದವರೆಗಿನ ದಾಳಿ ವ್ಯಾಪ್ತಿ ಹೊಂದಿರುವ ಈ ಕ್ಷಿಪಣಿಯು ಈಗಾಗಲೇ ಸೇನೆಗೆ ನಿಯೋಜನೆಗೊಂಡಿದೆ. ಸೇನಾಪಡೆಗಳೇ ಶನಿವಾರದ ಪರೀಕ್ಷಾರ್ಥ ಉಡಾವಣೆಯನ್ನು ನಡೆಸಿವೆ.

1 ಟನ್‌ನಷ್ಟು ತೂಕದ ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ರಾತ್ರಿವೇಳೆ ದಾಳಿ ನಡೆಸಲು ಬಳಸಬಹುದೇ ಎಂದು ಪರೀಕ್ಷಿಸಲಾಗಿದೆ. ಪರೀಕ್ಷೆ ಯಶಸ್ವಿಯಾಗಿದೆಎಂದು ಮೂಲಗಳು ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT