ಶುಕ್ರವಾರ, ಫೆಬ್ರವರಿ 26, 2021
19 °C

ಮಧ್ಯಪ್ರದೇಶ: ಟ್ರಕ್ ಪಲ್ಟಿಯಾಗಿ ಐವರು ಕಾರ್ಮಿಕರು ಸಾವು, 11 ಮಂದಿಗೆ ಗಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Narsinghpur District Collector Deepak Saxena speaking to ANI

ಭೋಪಾಲ್: ಮಧ್ಯಪ್ರದೇಶದ ನರಸಿಂಗಪುರದ ಪಥಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಟ್ರಕ್ ಪಲ್ಟಿಯಾಗಿ ಐವರು ಕಾರ್ಮಿಕರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ. ಔರಂಗಾಬಾದ್ ರೈಲು ದುರಂತದಲ್ಲಿ 16 ಕಾರ್ಮಿಕರು ಮೃತಪಟ್ಟ ಕಹಿ ನೆನಪು ಮಾಸುವ ಮುನ್ನವೇ ಈ ಘಟನೆ ಸಂಭವಿಸಿದೆ.

‘ಮಾವಿನ ಹಣ್ಣು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಒಟ್ಟು 18 ಕಾರ್ಮಿಕರು ಇದ್ದರು’ ಎಂದು ನರಸಿಂಗಪುರ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ತಿಳಿಸಿದ್ದಾರೆ.

ಕಾರ್ಮಿಕರು ತೆಲಂಗಾಣದ ಹೈದರಾಬಾದ್‌ನಿಂದ ಉತ್ತರ ಪ್ರದೇಶದ ಆಗ್ರಾಕ್ಕೆ ತೆರಳುತ್ತಿದ್ದರು ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು