ತಮಿಳುನಾಡು: ವರುಣನ ಅಬ್ಬರಕ್ಕೆ ಗ್ರಾಮಗಳು ಜಲಾವೃತ

7

ತಮಿಳುನಾಡು: ವರುಣನ ಅಬ್ಬರಕ್ಕೆ ಗ್ರಾಮಗಳು ಜಲಾವೃತ

Published:
Updated:
Deccan Herald

ನಾಗರಕೊಯಿಲ್‌ (ತಮಿಳುನಾಡು): ರಾಜ್ಯದ ಹಲವು ಭಾಗಗಳಲ್ಲಿ ಬುಧವಾರ ಭಾರಿ ಮಳೆ ಸುರಿದಿದೆ.

ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆರೆ, ಕಟ್ಟೆಗಳು ಭರ್ತಿಯಾಗಿವೆ. ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿರುವುದರಿಂದ, ನದಿ ಪಾತ್ರಗಳ ಗ್ರಾಮಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಲ್ಲಿ ಜನವಸತಿಗಳು ನೀರಿನಲ್ಲಿ ಮುಳುಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನೆಲೆ ಕಳೆದುಕೊಂಡಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರಕ್ಷಣಾ ಸಿಬ್ಬಂದಿ ಸ್ಥಳಾಂತರಿಸುತ್ತಿದ್ದಾರೆ.

ತಮಿಳುನಾಡಿಗೆ ಕೇರಳ ಮನವಿ
ಮುಲ್ಲಪೆರಿಯಾರ್ ಜಲಾಶಯದ ನೀರಿನ ಪ್ರಮಾಣ ತಗ್ಗಿಸಲು ಸಹಕಾರ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.

ಈ ಜಲಾಶಯದ ನೀರಿನ ಗರಿಷ್ಠ ಸಂಗ್ರಹ ಪ್ರಮಾಣ 142 ಅಡಿ ಇದ್ದು, ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಭಾರಿ ಮಳೆ ಸುರಿಯುತ್ತಿರುವುದರಿಂದ ಒಳ ಹರಿವು ಹೆಚ್ಚಾಗಿದೆ. ಜಲಾಶಯದ ನೀರಿನ ಮಟ್ಟವನ್ನು 142 ಅಡಿಯಿಂದ 139 ಅಡಿಗೆ ತಗ್ಗಿಸಲು ಕೇರಳ ಮುಖ್ಯಮಂತ್ರಿ, ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !