ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕವೇ ವಿಮಾನ ಸೇವೆ: ಹರ್ದೀಪ್‌ ಸಿಂಗ್‌

Last Updated 20 ಏಪ್ರಿಲ್ 2020, 19:34 IST
ಅಕ್ಷರ ಗಾತ್ರ

ನವದೆಹಲಿ: ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಬಳಿಕವಷ್ಟೇದೇಶಿಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲಾಗುವುದು’ ಎಂದುನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ಸ್ಪಷ್ಟಪಡಿಸಿದ್ದಾರೆ.

ಕೆಲವು ವಿಮಾನಯಾನ ಸಂಸ್ಥೆಗಳು ಟಿಕೆಟ್‌ ಬುಕ್ಕಿಂಗ್ ಆರಂಭಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು,‘ಸೋಂಕು ಸಂಪೂರ್ಣ ಹತೋಟಿಗೆ ಬಂದಿದೆ ಎಂದು ಸರ್ಕಾರಕ್ಕೆ ವಿಶ್ವಾಸ ಮೂಡಬೇಕು. ಜನತೆಗೆ ಯಾವುದೇ ಅಪಾಯ ಇಲ್ಲ ಎಂಬುದು ಖಚಿತವಾದ ನಂತರವೇ ವಿಮಾನ ಸೇವೆಗೆ ಅವಕಾಶ ನೀಡಲಾಗುವುದು’ ಎಂದು ಹೇಳಿದ್ದಾರೆ.

‘ಕೆಲವು ವಿಮಾನಯಾನ ಸಂಸ್ಥೆಗಳು ಸರ್ಕಾರದ ಸೂಚನೆ ಉಲ್ಲಂಘಿಸಿ ಬುಕ್ಕಿಂಗ್‌ ಪ್ರಾರಂಭಿಸಿದ್ದು, ಅಂತಹ ಸಂಸ್ಥೆಗಳಿಗೆ ಬುಕ್ಕಿಂಗ್‌ ಸ್ಥಗಿತಗೊಳಿಸುವಂತೆ ನಿರ್ದೇಶಿಸಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT