ಕೇರಳದಲ್ಲಿ ಭಾರಿ ಮಳೆಗೆ 22 ಜನರ ಸಾವು

7
ದೇವರನಾಡಿನಲ್ಲಿ ಜಲಪ್ರಳಯ; ಜನಜೀವನ ಅಸ್ತವ್ಯಸ್ತ

ಕೇರಳದಲ್ಲಿ ಭಾರಿ ಮಳೆಗೆ 22 ಜನರ ಸಾವು

Published:
Updated:
Deccan Herald

ಕೋಯಿಕ್ಕೋಡ್‌: ಕೇರಳ ರಾಜ್ಯದ ಹಲವು ಭಾಗಗಳಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟ ಮತ್ತು ಭೂಕುಸಿತಕ್ಕೆ 22 ಮಂದಿ ಬಲಿಯಾಗಿದ್ದಾರೆ. ಐದು ಮಂದಿ ಕಣ್ಮರೆಯಾಗಿದ್ದಾರೆ. ರಾಜ್ಯದ ನೈರುತ್ಯ ಜಿಲ್ಲೆಗಳಲ್ಲಿ ಪ್ರವಾಹ ಉಕ್ಕೇರಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಕೇಂದ್ರದ ನೆರವಿಗೆ ಮನವಿ:  ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅಧಿಕಾರಿಕಾರಿಗಳ ತುರ್ತು ಸಭೆ ನಡೆಸಿ, ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮತ್ತು ತುರ್ತು ಪರಿಹಾರ ಕಾರ್ಯಕೈಗೊಳ್ಳಲು ಸೂಚನೆ ನೀಡಿ
ದ್ದಾರೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ನೆರವಿಗೆ ಅವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪ್ರವಾಹದಿಂದ ಭಾರಿ ಹಾನಿಯಾಗಿದೆ. ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ. ಕೇಂದ್ರ ಸರ್ಕಾರವು ಪರಿಹಾರ ಕಾರ್ಯಕ್ಕೆ ತಕ್ಷಣ ಅಗತ್ಯ ಹಣಕಾಸು ನೆರವು ನೀಡಬೇಕು. ಭೂಸೇನೆ, ನೌಕಾಪಡೆ, ಕರಾವಳಿ ರಕ್ಷಣಾ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಾರಿ ಹಾನಿ; ಸಂಚಾರ ವ್ಯತ್ಯಯ: ಭೂಕುಸಿತದಿಂದಾಗಿ ಕೋಯಿಕ್ಕೋಡ್‌ ಮತ್ತು ಮೈಸೂರು ರಸ್ತೆಯಲ್ಲಿ ಬುಧವಾರ ರಾತ್ರಿಯಿಂದ ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ. ಇಡುಕ್ಕಿ ಮತ್ತು ವಯನಾಡು ರಸ್ತೆಯಲ್ಲೂ ಭೂಕುಸಿತ ಹಾಗೂ ಮರಗಳು ಉರುಳಿ ಬಿದ್ದಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ. ಘಾಟ್‌ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿದೆ.

ಕೊಚ್ಚಿ ವಿಮಾನ ನಿಲ್ದಾಣ ಸ್ಥಗಿತ: ಪೆರಿಯಾರ್‌ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಭಾರಿ ಮಳೆ ಮುನ್ಸೂಚನೆ

ಪುಣೆ (ಪಿಟಿಐ): ಕರ್ನಾಟಕದ ಕರಾವಳಿ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆ ಸುರಿಯುವ ನಿರೀಕ್ಷೆ ಇದೆ.

ಆಗಸ್ಟ್‌ 10ರಿಂದ 12ರವರೆಗೆ ಕರ್ನಾಟಕದ ಕರಾವಳಿ, ಮಧ್ಯಪ್ರದೇಶ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಪ್ರದೇಶ, ಹರಿಯಾಣ, ದೆಹಲಿ, ಅರುಣಾಚಲಪ್ರದೇಶ, ಛತ್ತೀಸಗಡ, ಜಾರ್ಖಂಡ್‌, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೀನುಗಾರರು ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಅಂಕಿ ಅಂಶ

ಎಲ್ಲೆಲ್ಲಿ ಎಷ್ಟು ಸಾವು

ಇಡುಕಿ ಜಿಲ್ಲೆಯಲ್ಲಿ 11 ಮಂದಿ

ಮಲ್ಲಪ್ಪುರಂ ಜಿಲ್ಲೆಯಲ್ಲಿ 5 ಜನರು

ವಯನಾಡು ಜಿಲ್ಲೆಯಲ್ಲಿ 3 ಮಂದಿ

ಕಣ್ಣೂರು ಭಾಗದಲ್ಲಿ 2

ಕೋಯಿಕ್ಕೋಡ್‌ನಲ್ಲಿ 1

ಮುಖ್ಯಾಂಶ

* ರಾಜ್ಯದ ನೈರುತ್ಯ ಜಿಲ್ಲೆಗಳ ಹಲವು ಭಾಗಗಳಲ್ಲಿ ಮುಂಗಾರು ಆರ್ಭಟ

* ಭೂಕುಸಿತದಿಂದ ಅಪಾರ ಆಸ್ತಿ ಹಾನಿ, ಸಂಚಾರ ಅಸ್ತವ್ಯಸ್ತ

* ರಾಜ್ಯದ ಎಲ್ಲ ಜಲಾಶಯಗಳು ಭರ್ತಿ; ಪ್ರಮುಖ ಜಲಾಶಯಗಳಿಂದ ನೀರು ಹೊರ ಬಿಡಲಾಗಿದೆ

* ಪ್ರವಾಹದ ಮುನ್ನೆಚ್ಚರಿಕೆಯಿಂದ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಸ್ಥಗಿತ

* ಕೇರಳದ ಪ್ರಸಿದ್ಧ ದೋಣಿ ಸ್ಪರ್ಧೆ ಮುಂದೂಡಿಕೆ

* ಆಗಸ್ಟ್‌ 12ರವರೆಗೆ ಭಾರಿ ಮಳೆ ಸುರಿಯುವ ಮುನ್ಸೂಚನೆ

* ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆ

* ಇಡುಕ್ಕಿ, ಕೊಲ್ಲಂ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ 

ರಾಜ್ಯದಲ್ಲಿ ಪ್ರವಾಹ ಬಹಳ ಕಠೋರವಾಗಿದೆ. ಇತಿಹಾಸದಲ್ಲಿ ಇದೇ ಮೊದಲು 22 ಜಲಾಶಯಗಳು ಭರ್ತಿಯಾಗಿವೆ. ಎಲ್ಲ ಜಲಾಶಯಗಳ ಗೇಟು ತೆರೆಯಲಾಗಿದೆ
–ಪಿಣರಾಯಿ ವಿಜಯನ್‌, ಕೇರಳ ಮುಖ್ಯಮಂತ್ರಿ

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !