ವಾಜಪೇಯಿ ಅಂತ್ಯಸಂಸ್ಕಾರಕ್ಕೆ ಬಂದಿದ್ದಾರೆ ವಿದೇಶಿ ಗಣ್ಯರು

7

ವಾಜಪೇಯಿ ಅಂತ್ಯಸಂಸ್ಕಾರಕ್ಕೆ ಬಂದಿದ್ದಾರೆ ವಿದೇಶಿ ಗಣ್ಯರು

Published:
Updated:

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲೆಂದು ಭೂತಾನ್ ಮಹಾರಾಜ ಸೇರಿದಂತೆ ಹಲವು ವಿದೇಶಿ ಗಣ್ಯರು ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಿಂದ ಸ್ಮೃತಿ ಸ್ಥಳದತ್ತ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿದೆ. ಸಂಜೆ 4 ಗಂಟೆಗೆ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನೆರವೇರಲಿವೆ.

ವಿದೇಶಿ ಗಣ್ಯರು:
ಭೂತನ್ ರಾಜ ಜಿಗ್ಮೆ ಖೇಸರ್ ನಾಮ್‌ಗ್ಯಾಲ್ ವಾಂಗ್‌ಚುಕ್, ನೇಪಾಳದ ವಿದೇಶಾಂಗ ವ್ಯವಹಾರ ಸಚಿವ ಪ್ರದೀಪ್ ಕುಮಾರ್ ಗ್ಯಾವಾಲಿ, ಶ್ರೀಲಂಕಾ ವಿದೇಶಾಂಗ ವ್ಯವಹಾರ ಸಚಿವ ಲಕ್ಷ್ಮಣ್ ಕಿರೀಲ್ಲಾ, ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬ್ದುಲ್ ಹಸನ್ ಮೆಹ್‌ಮೂದ್ ಅಲಿ, ಪಾಕಿಸ್ತಾನದ ಕಾನೂನು ಸಚಿವ ಅಲಿ ಜಫಾರ್ ಅಂತ್ಯ ಸಂಸ್ಕಾರದ ವೇಳೆ ಹಾಜರಿರುತ್ತಾರೆ.

ನಗರಾಭಿವೃದ್ಧಿ ಇಲಾಖೆಯು ಸುಮಾರು 1.5 ಎಕರೆ ಭೂಮಿಯನ್ನು ವಾಜಪೇಯಿ ಸ್ಮಾರಕಕ್ಕಾಗಿ ಮಂಜೂರು ಮಾಡಿದೆ. ರಾಷ್ಟ್ರದ ವಿವಿಧ ರಾಜ್ಯಗಳಿಂದಲೂ ಪ್ರಮುಖ ನಾಯಕರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೈದ್ಧಾಂತಿಕ ಭಿನ್ನಮತಗಳನ್ನು ಬದಿಗಿರಿಸಿ ಅರವಿಂದ್ ಕೇಜ್ರಿವಾಲ್, ಚಂದ್ರಬಾಬುನಾಯ್ಡು, ಸೀತಾರಾಮ್ ಯೆಚೂರಿ ಅವರು ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಲಿದ್ದಾರೆ.

ಕೇವಲ ರಾಜಕಾರಿಣಿಗಳಷ್ಟೇ ಅಲ್ಲ, ಸಿನಿಮಾ ನಟರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರೂ ಮಾಜಿ ಪ್ರಧಾನಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸಂದೇಶಗಳು ತುಂಬಿಹೋಗಿವೆ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 3

  Sad
 • 0

  Frustrated
 • 1

  Angry

Comments:

0 comments

Write the first review for this !