ಗುರುವಾರ , ಏಪ್ರಿಲ್ 2, 2020
19 °C

ಕೋವಿಡ್‌–19 ಭೀತಿ: ಇರಾನ್‌ನಿಂದ 58 ಭಾರತೀಯರನ್ನು ಕರೆತಂದ ವಾಯುಪಡೆ ವಿಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಇರಾನ್‌ನಲ್ಲಿ ಕೋವಿಡ್‌–19 ವ್ಯಾಪಕವಾಗಿ ಹರಡುತ್ತಿದ್ದು ಅಲ್ಲಿಂದ 58 ಭಾರತೀಯರನ್ನು ವಾಯುಪಡೆಯ ವಿಶೇಷ ವಿಮಾನದಲ್ಲಿ ಭಾರತಕ್ಕೆ ಕರೆತರಲಾಗಿದೆ. 

ನಿನ್ನೆ ಭಾರತೀಯರನ್ನು ಕರೆತರಲು ಸಿ–17 ಗ್ಲೋಬ್‌ ಮಾಸ್ಟರ್‌ ಸೇನಾ ವಿಮಾನವನ್ನು ಇರಾನ್‌ಗೆ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ಘಾಜಿಯಾಬಾದ್‌ನ ಸೇನಾ ವಾಯು ನೆಲೆಗೆ ಬಂದಿಳಿಯಿತು. ಇದೀಗ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದ್ದು ಎರಡನೇ ಹಂತದ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ಸಚಿವರು ಟ್ವೀಟ್‌ ಮಾಡಿದ್ದಾರೆ.

ನೂರಕ್ಕೂ ಹೆಚ್ಚು ಭಾರತೀಯರು ಇರಾನ್‌ನಲ್ಲಿ ನೆಲೆಸಿದ್ದು ಅವರನ್ನೂ ಒಂದೆರಡು ದಿನಗಳಲ್ಲಿ ಕರೆತರಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು