ಮಂಗಳವಾರ, ಫೆಬ್ರವರಿ 18, 2020
30 °C

ಪ್ರತಿಭಟನಕಾರರಿಗೆ ವಿದೇಶಿ ಹಣ: ಕಿರಣ್‌ ರಿಜಿಜು ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Kiren Rijiju

ಲಖನೌ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ನಡೆಸುತ್ತಿರುವ ಪ್ರತಿಭಟನಕಾರರು ವಿದೇಶದಿಂದ ದೇಣಿಗೆ ಪಡೆಯುತ್ತಿದ್ದಾರೆ. ದೇಶವನ್ನು ವಿಭಾಗಿಸುವುದೇ ಇವರ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಆರೋಪ‍ ಮಾಡಿದ್ದಾರೆ. 

‘ಕಾಯ್ದೆಯನ್ನು ವಿರೋಧಿಸುತ್ತಿರುವ ಈ ‘ತುಕಡೆ ತುಕಡೆ ಗ್ಯಾಂಗ್‌’ನ ಸಂಖ್ಯೆ ಕಡಿಮೆ ಇದೆ. ಕೆಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಚಲನಚಿತ್ರತಾರೆಯರು ಮತ್ತು ಸಾಮಾಜಿಕ ಜಾಲತಾಣವನ್ನು ತಮ್ಮ ಉದ್ದೇಶ ಸಾಧನೆಗಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.  

‘ಯುವಕರು ಇಂತಹ ದೇಶದ್ರೋಹಿಗಳ ಕಾರ್ಯಕ್ಕೆ ಬೆಂಬಲ ನೀಡದೇ, ಶ್ರೇಷ್ಠ ಭಾರತವನ್ನು ನಿರ್ಮಿಸಲು ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು