ಬುಧವಾರ, ಸೆಪ್ಟೆಂಬರ್ 18, 2019
22 °C

ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ನಿಧನ

Published:
Updated:

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಜಗನ್ನಾಥ ಮಿಶ್ರಾ (81) ಸೋಮವಾರ ದೆಹಲಿಯಲ್ಲಿ ನಿಧನರಾದರು. ಅವರು ದೀರ್ಘ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು.

ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಮಿಶ್ರಾ ಅವರು ಪಿ.ವಿ.ನರಸಿಂಹ ರಾವ್ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಮೂರು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ಮಿಶ್ರಾ ನಿಧನಕ್ಕೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಬಿಹಾರದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಮಿಶ್ರಾ ಅವರಿಗೆ ಜೈಲು ಶಿಕ್ಷೆಯಾಗಿತ್ತು. ಬಳಿಕ 2018ರ ಜುಲೈನಲ್ಲಿ ಜಾರ್ಖಂಡ್ ಹೈಕೋರ್ಟ್ ಚಿಕಿತ್ಸೆ ಉದ್ದೇಶಕ್ಕಾಗಿ ಅವರಿಗೆ ಜಾಮೀನು ನೀಡಿತ್ತು. ಮಿಶ್ರಾ ಅವರು ಗುರುಗ್ರಾಮದ ಆಸ್ಪತ್ರೆಯೊಂದರಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.

Post Comments (+)