ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಕೇರಳ ಪ್ರವೇಶಿಸುವಂತಿಲ್ಲ: ಹೈಕೋರ್ಟ್

ಜಾಮೀನು ಮಂಜೂರು
Last Updated 15 ಅಕ್ಟೋಬರ್ 2018, 9:36 IST
ಅಕ್ಷರ ಗಾತ್ರ

ತಿರುವನಂತಪುರಂ: ಕ್ರೈಸ್ತ ಸನ್ಯಾಸಿನಿ ಮೇಲಿನ ಅತ್ಯಾಚಾರ ಆರೋಪ ಎದುರಿಸುತ್ತಿರುವ ಜಲಂಧರ್‌ನ ರೋಮನ್‌ ಕ್ಯಾಥೋಲಿಕ್‌ ಬಿಷಪ್‌ ಫ್ರಾಂಕೊ ಮುಲ್ಲಕಲ್‌ಗೆ ಕೇರಳ ಹೈಕೋರ್ಟ್ ಸೋಮವಾರ ಜಾಮೀನು ನೀಡಿದೆ.

ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶ ರಾಜ ವಿಜಯರಾಘವನ್, ಈ ಪ್ರಕರಣದ ಸಂಬಂಧ 15 ದಿನಗಳಿಗೊಮ್ಮೆ ನಡೆಯುವ ವಿಚಾರಣೆ ಹೊರತುಪಡಿಸಿ ಉಳಿದ ದಿನಗಳಲ್ಲಿ ಕೇರಳ ರಾಜ್ಯವನ್ನು ಪ್ರವೇಶಿಸುವಂತಿಲ್ಲ ಎಂದು ನಿರ್ದೇಶನ ನೀಡಿದ್ದಾರೆ.ಜೊತೆಗೆ ತಮ್ಮ ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಅತ್ಯಾಚಾರ ಸಂಬಂಧ ಬಿಷಪ್ ಅವರನ್ನು ಸೆ.21ರಂದು ಕೇರಳ ಪೊಲೀಸರು ಬಂಧಿಸಿದ್ದರು.

ಏನಿದು ಪ್ರಕರಣ?
2014ರಲ್ಲಿ ಬಿಷಪ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸನ್ಯಾಸಿನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಸನ್ಯಾಸಿನಿ ವೆಟಿಕನ್‍ಗೆ ಪತ್ರ ಬರೆದು ಬಿಷಪ್‌‍ನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದರು. ಬಿಷಪ್ ಈ ಪ್ರಕರಣವನ್ನು ಮುಚ್ಚಿಹಾಕಲು ರಾಜಕೀಯ ಮತ್ತು ಹಣದ ಬಲ ಉಪಯೋಗಿಸುತ್ತಿದ್ದಾರೆ ಎಂದು ಕ್ರೈಸ್ತ ಸನ್ಯಾಸಿನಿ ಆರೋಪಿಸಿದ್ದರು. ಆದರೆ ಈ ಆರೋಪಗಳೆಲ್ಲವೂ ಸುಳ್ಳು ಎಂದು ಬಿಷಪ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT