ಬುಧವಾರ, ಆಗಸ್ಟ್ 21, 2019
28 °C

ಬಿಜೆಪಿ ಹಿರಿಯ ನಾಯಕ ಅರುಣ್‌ ಜೇಟ್ಲಿ ಅಸ್ವಸ್ಥ: ಏಮ್ಸ್‌ಗೆ ದಾಖಲು

Published:
Updated:

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಶುಕ್ರವಾರ ಉಸಿರಾಟದ ತೊಂದರೆ ಅನುಭವಿಸಿದ್ದು, ಇಲ್ಲಿನ ಏಮ್ಸ್‌ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರಗೆ ದಾಖಲಿಸಲಾಗಿದೆ.

ತೀವ್ರ ನಿಶ್ಯಕ್ತಿ ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಳೆದ ಕೆಲವು ತಿಂಗಳಿಂದ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 

ಇದನ್ನೂ ಓದಿ: ಆರೋಗ್ಯವೋ.. ಆಡಳಿತವೋ?– ರಾಜಕೀಯ ದ್ವಂದ್ವ

ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಹೃದ್ರೋಗ ಹಾಗೂ ಇತರೆ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಏಮ್ಸ್‌ ವೈದ್ಯರು ತಿಳಿಸಿದ್ದಾರೆ. 

ಇದೇ ಜನವರಿಯಲ್ಲಿ ವೈದ್ಯಕೀಯ ತಪಾಸಣೆಗಾಗಿ ಅವರು ನ್ಯೂಯಾರ್ಕ್‌ಗೆ ತೆರಳಿದ್ದರು. ಕಳೆದ ವರ್ಷ ಏಪ್ರಿಲ್‌ನಲ್ಲಿ ಕಿಡ್ನಿ ಸಮಸ್ಯೆಯಿಂದ ಏಮ್ಸ್‌ಗೆ ದಾಖಲಾಗಿದ್ದ 66 ವರ್ಷ ವಯಸ್ಸಿನ ಅರುಣ್‌ ಜೇಟ್ಲಿ ಮೇನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇದನ್ನೂ ಓದಿ: ಜನನಾಯಕರ ಆರೋಗ್ಯ ಗೌಪ್ಯ!

ಜೇಟ್ಲಿ ಅನುಪಸ್ಥಿತಿಯಲ್ಲಿ ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸಿದ್ದ ಕೊನೆಯ ಬಜೆಟ್ ಅನ್ನು ಸಚಿವ ಪಿಯೂಶ್‌ ಗೋಯಲ್‌ ಮಂಡಿಸಿದ್ದರು. 

Post Comments (+)