ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕೋವಿಡ್-19ನಿಂದ ಮಾಜಿ ಫುಟ್‌ಬಾಲ್ ಆಟಗಾರ ಹಮ್ಸಾ ಕೋಯಾ ಸಾವು

Last Updated 6 ಜೂನ್ 2020, 9:24 IST
ಅಕ್ಷರ ಗಾತ್ರ

ಮಲಪ್ಪುರಂ: ಕೇರಳದಲ್ಲಿ ಶನಿವಾರ ಕೋವಿಡ್-19ನಿಂದಾಗಿ ಇನ್ನೂ ಒಂದು ಸಾವು ಸಂಭವಿಸಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 15 ಜನರು ಸಾವಿಗೀಡಾಗಿದ್ದಾರೆ.

ಸಂತೋಷ್ ಟ್ರೋಫಿಯಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಿದ್ದ 61 ವರ್ಷದ ಮಾಜಿ ಫುಟ್ಬಾಲ್ ಆಟಗಾರ ಹಮ್ಸಾ ಕೋಯಾ ಮೃತಪಟ್ಟಿದ್ದಾರೆ. ಅವರು ಮೇ 21 ರಂದು ತಮ್ಮ ಕುಟುಂಬದೊಂದಿಗೆ ಮುಂಬೈನಿಂದ ಕೇರಳಕ್ಕೆ ಹಿಂತಿರುಗಿದ್ದರು. ವೇಳೆ ಕೋವಿಡ್-19 ತಗುಲಿರುವುದು ಪತ್ತೆಯಾಗಿತ್ತು.

ಕೋಯಾ ಅವರು ಮಲಪ್ಪುರಂನ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ನ್ಯುಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ವೈದ್ಯಕೀಯ ಬುಲೆಟಿನ್‌ ತಿಳಿಸಿದೆ.

ಜೂನ್ 5 ರಂದು ಕೋಯಾ ಅವರ ಆರೋಗ್ಯವು ಹದಗೆಟ್ಟಿದ್ದರಿಂದ, ಅವರಿಗೆ ರಾಜ್ಯ ವೈದ್ಯಕೀಯ ಮಂಡಳಿಯ ಸಲಹೆಯ ಮೇರೆಗೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲಾಯಿತು. ಆದರೆ, ಔಷಧಿಗಳಿಗೆ ಸ್ಪಂದಿಸದ ಅವರು ಶನಿವಾರ ಬೆಳಿಗ್ಗೆ 6.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ಕೋಯಾ ಅವರ ಪತ್ನಿ, ಮಗ, ಸೊಸೆ ಮತ್ತು ಮೊಮ್ಮಕ್ಕಳಾದ 3 ವರ್ಷದ ಮತ್ತು 3 ತಿಂಗಳ ಮಗು ಸೇರಿದಂತೆ ಅವರ ಕುಟುಂಬ ಸದಸ್ಯರೆಲ್ಲರಿಗೂ ಸಹ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಮತ್ತು ಈ ಮೊದಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT