₹ 5 ಕೋಟಿ ನೀಡಿದವರಿಗೆ ಟಿಕೆಟ್: ಹರಿಯಾಣ ಕಾಂಗ್ರೆಸ್ ನಾಯಕನ ಆರೋಪ

ಚಂಡಿಗಡ: ಕಾಂಗ್ರೆಸ್ ಪಕ್ಷಕ್ಕೆ ಪಕ್ಷದ ಅಭ್ಯರ್ಥಿ ಗೆಲುವು ಮುಖ್ಯವಲ್ಲ, ₹ 5 ಕೋಟಿ ನೀಡಿದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಹರಿಯಾಣದ ಕಾಂಗ್ರೆಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಅಶೋಕ್ ತನ್ವಾರ್ ಬುಧವಾರ ಆರೋಪಿಸಿದ್ದಾರೆ.
ಇದನ್ನೂ ಓದಿ: ಹರಿಯಾಣ: ಬಿಜೆಪಿ ಗೆಲ್ಲುವ ನೆಚ್ಚಿನ ಪಕ್ಷ
ಅಶೋಕ್ ತನ್ವಾರ್ ಅವರು ಸೋನಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ವಿರುದ್ಧ ಹಣಕ್ಕಾಗಿ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
Delhi: Former Haryana Congress Chief Ashok Tanwar holds protest outside Cong HQ, says, "For 5yrs I gave my blood&sweat for Congress.Leadership in Haryana has been destroyed.We've been dedicated to the Party.Why give tickets to those who've recently joined&criticised Cong earlier" pic.twitter.com/DgatGHgcYN
— ANI (@ANI) October 2, 2019
ಇಲ್ಲಿನ ಕಾಂಗ್ರೆಸ್ ಮುಖ್ಯ ಕಚೇರಿಯ ಎದುರು ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ಅವರು, ಪಕ್ಷಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿದ್ದೇನೆ ಕಳೆದ 5 ವರ್ಷ ಪಕ್ಷದ ನಾಯಕನಾಗಿ ಪಕ್ಷವನ್ನು ಬೆಳೆಸಿದ್ದೇನೆ ಆದರೂ ಟಿಕೆಟ್ ನೀಡದೇ ವಂಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಹರಿಯಾಣ: ಐಎನ್ಎಲ್ಡಿ ಉಳಿವೇ ಕಷ್ಟ
ಹೊಸದಾಗಿ ಬಂದವರಿಗೆ ಮಣೆ ಹಾಕಲಾಗುತ್ತಿದ್ದು, ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗುತ್ತಿದೆ ಎಂದು ಟಿಕೆಟ್ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗುತ್ತಿಲ್ಲ ಎಂದು ಅಶೋಕ್ ತನ್ವಾರ್ ಆರೋಪಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.