ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್‌ಗೆ ರಾಜಕೀಯ ಮುಖಂಡರು

7

ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ಮತ್ತಷ್ಟು ಗಂಭೀರ; ಏಮ್ಸ್‌ಗೆ ರಾಜಕೀಯ ಮುಖಂಡರು

Published:
Updated:
Deccan Herald

ನವದೆಹಲಿ: ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಪರಿಗಣಿತರಾಗಿರುವ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ (93) ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ರಾಜಕೀಯ ಮುಖಂಡರು ಇಲ್ಲಿನ ಏಮ್ಸ್‌ಗೆ ಭೇಟಿ ನೀಡುತ್ತಿದ್ದಾರೆ. 

ಕಳೆದ 24 ಗಂಟೆಗಳಿಂದ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಏಮ್ಸ್‌ ವೈದ್ಯರು ತಿಳಿಸಿದ್ದು, ಈಗಾಗಲೇ ಗೃಹ ಸಚಿವ ರಾಜನಾಥ ಸಿಂಗ್‌, ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಸೇರಿ ಅನೇಕ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದ್ದು, ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹ ಶೀಘ್ರದಲ್ಲಿಯೇ ಏಮ್ಸ್‌ಗೆ ಭೇಟಿ ನೀಡಲಿರುವ ಮಾಹಿತಿ ಲಭ್ಯವಾಗಿದೆ. 

ಗ್ವಾಲಿಯರ್‌ನಲ್ಲಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಾಜಪೇಯಿ ಅವರ ಆರೋಗ್ಯ ಸುಧಾರಿಸುವಂತೆ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. 

ಒಂದೇ ಒಂದು ಬಾರಿ ಅವರು ಎದ್ದು ಭಾಷಣ ಮಾಡಲಿ ಎಂದು ಪ್ರಾರ್ಥಿಸುತ್ತಿದ್ದೇವೆ. ಅವರನ್ನು ನಮ್ಮ ಜೀವನದಲ್ಲಿ ಎಂದಿಗೂ ಮರೆಯದಂತೆ ಕಣ್ತುಂಬಿಕೊಳ್ಳುತ್ತೇವೆ ಎಂದು ವಾಜಪೇಯಿ ಅವರ ಸಂಬಂಧಿ ಕಾಂತಿ ಮಿಶ್ರಾ ದುಃಖತಪ್ತರಾದರು. 

ತೀವ್ರ ನಿಗಾ ಘಟಕದಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯಲ್ಲಿರುವ ವಾಜಪೇಯಿ ಅವರನ್ನು ಕಾಣಲು ದೇಶದ ಎಲ್ಲ ಭಾಗಗಳಿಂದ ರಾಜಕೀಯ ನಾಯಕರು, ಅಭಿಮಾನಿಗಳು ಆಸ್ಪತ್ರೆಯತ್ತ ಬರುತ್ತಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಹ ಕೆಲವೇ ಹೊತ್ತಿನಲ್ಲಿ ದೆಹಲಿಗೆ ಬರಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವಾರಾಜ್‌ ಇದೀಗ ಏಮ್ಸ್‌ಗೆ ಬಂದಿದ್ದಾರೆ. ಬೆಳಿಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಚಿವೆ ಸ್ಮೃತಿ ಇರಾನಿ ಹಾಗೂ ಜೆ.ಪಿ.ನಡ್ಡಾ ಭೇಟಿ ನೀಡಿದ್ದರು. 

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 16

  Sad
 • 0

  Frustrated
 • 0

  Angry

Comments:

0 comments

Write the first review for this !