ನಾಳೆ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ: ರಾಜ್ಯದಲ್ಲಿ 7 ದಿನ ಶೋಕಾಚರಣೆ

7

ನಾಳೆ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ: ರಾಜ್ಯದಲ್ಲಿ 7 ದಿನ ಶೋಕಾಚರಣೆ

Published:
Updated:

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ನಾಳೆ (ಆಗಸ್ಟ್ 17) ಶಾಲಾ–ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ.

ಆಗಸ್ಟ್ 16 ರಿಂದ 22 ರ ವರೆಗೆ ರಾಜ್ಯದಾದ್ಯಂತ 7 ದಿನಗಳ ಶೋಕಾಚರಣೆ ಘೋಷಿಸಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಇರುವ ಕಾರಣ ತುರ್ತು ಪರಿಸ್ಥಿತಿ ನಿಭಾಯಿಸುವ ಹಾಗೂ ಪರಿಹಾರ ಒದಗಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ಅನ್ವಯಿಸುವಂತೆ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಆಗಸ್ಟ್ 17 ರಂದು ಒಂದು ದಿನ ರಜೆ ಘೋಷಿಸಲಾಗಿದೆ.

ನವದೆಹಲಿ ವರದಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನ ಕ್ಕೆ ದೇಶದಾದ್ಯಂತ ಏಳು ದಿನ ಶೋಕಾಚರಣೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಏಳು ದಿನಗಳ ಕಾಲ ದೇಶದ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜನವನ್ನು ಅರ್ಧಮಟ್ಟಕ್ಕೆ ಇಳಿಸಿ ಗೌರವ ಸಲ್ಲಿಸಲಾಗುವುದು.

ಮರೆಯಾದ ಛಲವಾದಿ, ಕವಿ ಅಟಲ್‌ ಬಿಹಾರಿ ವಾಜಪೇಯಿ

ಅಜಾತಶತ್ರು, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್‌) ಆಸ್ಪತ್ರೆಯಲ್ಲಿ ಗುರುವಾರ ಸಂಜೆ 5:05ಕ್ಕೆ ನಿಧನರಾದರು.

ಹಲವು ವರ್ಷಗಳಿಂದ ಉಸಿರಾಟ ತೊಂದರೆ ಮತ್ತು ಮೂತ್ರ ಪಿಂಡ ಸೋಕಿನಿಂದ ಅವರು ಬಳಲುತ್ತಿದ್ದರು. ಜೂನ್‌ 11 ರಂದು ಏಮ್ಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ.ರಣದೀಪ್‌ ಗುಲೇರಿಯಾ ನೇತೃತ್ವದ ವೈದ್ಯರ ತಂಡ ವಾಜಪೇಯಿ ಅವರಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡುತ್ತಿತ್ತು.

ಇನ್ನಷ್ಟು: 

ಪೋಖ್ರಾನ್‌ ಅಣ್ವಸ್ತ್ರ ಪರೀಕ್ಷೆ ಯಶಸ್ಸಿನ ಹಿಂದೆ ವಾಜಪೇಯಿ ನಿರ್ಧಾರದ ಬಲ

ಹಿಂದುತ್ವದ ಬಿಗಿ ಎರಕದೊಳಗೂ ಮೈಕೊಡವುತ್ತಿದ್ದ ರಾಷ್ಟ್ರನಾಯಕ​

* ನನ್ನವರ ಗುಂಪಲ್ಲಿ ನನಗೆ ಗೆಳೆಯರೇ ಇಲ್ಲ: ಕವಿ ವಾಜಪೇಯಿ

ವಾಜಪೇಯಿ ನಿಧನ:  ಮನೆಯೆದುರೂ ಜಮಾಯಿಸಿದ ಜನಜಂಗುಳಿ...

ಯುದ್ಧದ ನಡುವೆಯೂ ಸ್ನೇಹ ಸೇತು ಬೆಸೆದಿದ್ದ ‘ಅಜಾತಶತ್ರು’​

ಅಜಾತಶತ್ರುವಿನ ಹೆಜ್ಜೆ ಗುರುತುಗಳು

ವಾಜಪೇಯಿ: ಹೋಲಿಕೆ ಇಲ್ಲದ ನಾಯಕ

ಬರಹ ಇಷ್ಟವಾಯಿತೆ?

 • 14

  Happy
 • 1

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !