ಶುಕ್ರವಾರ, ಜೂಲೈ 3, 2020
21 °C

ಕೇಂದ್ರದ ಮಾಜಿ ಸಚಿವ ಅರ್ಜುನ್‌ ಚರಣ್‌ ಸೇಥಿ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಕೇಂದ್ರದ ಮಾಜಿ ಸಚಿವ ಅರ್ಜುನ್‌ ಚರಣ್‌ ಸೇಥಿ ಸೋಮವಾರ ಇಲ್ಲಿ ನಿಧನರಾದರು. ಅವರಿಗೆ 79 ವರ್ಷವಾಗಿತ್ತು. 

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸೇಥಿ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಭದ್ರಕ್‌ ಲೋಕಸಭೆ ಕ್ಷೇತ್ರದಿಂದ ಎಂಟು ಬಾರಿ ಆಯ್ಕೆಯಾಗಿದ್ದರು. ಅಟಲ್‌ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 2000 ರಿಂದ 2004ವರೆಗೆ ಕೇಂದ್ರ ಜಲಸಂಪನ್ಮೂಲ ಸಚಿವರಾಗಿದ್ದರು.

ಮೃದುಭಾಷಿಯಾಗಿದ್ದ ಅವರು, ಯುವವಯಸ್ಸಿನಲ್ಲಿಯೇ ಸಾಮಾಜಿಕ ಸೇವೆ ಮತ್ತು ರಾಜಕೀಯ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಶಾಸಕ, ಸಂಸದರಾಗಿ ಸೇವಾ ಬದ್ಧತೆಯಿಂದ ಗಮನಸೆಳೆದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.