ಸೋಮವಾರ, ಜನವರಿ 20, 2020
20 °C

ಸಮಾಜವಾದಿ ಪಕ್ಷದ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಮೌ (ಉತ್ತರಪ್ರದೇಶ): ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಬಿಜ್ಲಿ ಯಾದವ್ (40) ಅವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ.

ಬಿಜ್ಲಿ ಯಾದವ್ ಅವರು ಸೆಕ್ವಲಿಯಾ ಗ್ರಾಮದಲ್ಲಿ ಮುಂಜಾನೆ ವಾಕಿಂಗ್‌ಗೆ ಹೋಗಿದ್ದಾಗ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. 

ಬಿಜ್ಲಿ ಅವರಿಗೆ ಯಾರೊಂದಿಗೂ ದ್ವೇಷವಿರಲಿಲ್ಲ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು