ಮಂಗಳವಾರ, ಸೆಪ್ಟೆಂಬರ್ 17, 2019
24 °C

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಆರೋಗ್ಯ ಸ್ಥಿರ

Published:
Updated:
Prajavani

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಅವರಿಗೆ ತೀವ್ರ ಉಸಿರಾಟದ ತೊಂದರೆ  ಕಾಣಿಸಿಕೊಂಡಿದ್ದರಿಂದ ಶುಕ್ರವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

75 ವರ್ಷ ವಯಸ್ಸಿನ ಹಿರಿಯ ಸಿಪಿಎಂ ನಾಯಕ ಭಟ್ಟಾಚಾರ್ಯ ಅವರಿಗೆ ದೀರ್ಘ ಕಾಲದಿಂದ ಶ್ವಾಸಕೋಶದ ಸಮಸ್ಯೆ ಇದ್ದು ‘ಚಿಕಿತ್ಸೆ ನಂತರ ಆರೋಗ್ಯ ಸುಧಾರಿಸಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯಪಾಲ ಜಗ್‌ದೀಪ್‌ ಧನ್ಕರ್‌, ಸಿ.ಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ  ನೀಡಿ ಅವರ ಆರೋಗ್ಯ ವಿಚಾರಿಸಿದರು.

Post Comments (+)