ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಸಂಘರ್ಷ | 20 ಯೋಧರ ಸಾವು, ನಾಲ್ವರ ಸ್ಥಿತಿ ಗಂಭೀರ

Last Updated 17 ಜೂನ್ 2020, 5:15 IST
ಅಕ್ಷರ ಗಾತ್ರ

ನವದೆಹಲಿ: ಗಾಲ್ವನ್‌ ಕಣಿವೆ ಮತ್ತು ಪೂರ್ವ ಲಡಾಖ್‌ ಪ್ರದೇಶದಲ್ಲಿ ಸೋಮವಾರ ರಾತ್ರಿ ಚೀನಾದ ಸೈನಿಕರ ಜತೆ ನಡೆದ ಘರ್ಷಣೆಯಲ್ಲಿ 20 ಯೋಧರು ಹುತಾತ್ಮರಾಗಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಈ ಹಿಂಸಾಚಾರದಲ್ಲಿ 16 ಬಿಹಾರ ರೆಜಿಮೆಂಟ್‌ನ ಕರ್ನಲ್‌ ಬಿ. ಸಂತೋಷ್‌ ಬಾಬು, ಯೋಧರಾದ ಹವಾಲ್ದಾರ್‌ ಪಳನಿ ಮತ್ತು ಸಿಪಾಯಿ ಓಝಾ ಸೇರಿದಂತೆ ಇಪ್ಪತ್ತು ಮಂದಿ ಯೋಧರು ಮೃತಪಟ್ಟಿದ್ದಾರೆ. ಅಲ್ಲದೆ, ಇದಕ್ಕೆ ಪ್ರತಿಯಾಗಿ ಚೀನಾದ 43 ಸೈನಿಕರು ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಭಾರತ–ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಉಭಯ ದೇಶಗಳ ಸೇನೆಯ ಹಿರಿಯ ಅಧಿಕಾರಿಗಳು ಪರಿಸ್ಥಿತಿ ಶಮನಕ್ಕಾಗಿ ಮಾತುಕತೆ ಆರಂಭಿಸಿದ್ದಾರೆ ಎಂದು ಸೇನೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT