ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಶೋಪಿಯಾನ್‌ನಲ್ಲಿ ಮೂವರು ಉಗ್ರರ ಹತ್ಯೆ

Last Updated 8 ಜೂನ್ 2020, 4:10 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅವಿತಿರುವ ಮಾಹಿತಿ ಹಿನ್ನೆಲೆಯಲ್ಲಿ ಶೋಪಿಯಾನ್‌ನ ಪಿಂಜೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ, ಉಗ್ರರು ಭದ್ರಾತಾ ಪಡೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ಯೆಯಾದ ಉಗ್ರರ ಗುರುತನ್ನು ಭದ್ರತಾ ಪಡೆಗಳು ಇನ್ನೂ ಬಹಿರಂಗಪಡಿಸಿಲ್ಲ. ಕಳೆದ 24 ಗಂಟೆಗಳಲ್ಲಿ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ. ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಹಿಜ್ಬುಲ್ ಮುಜಾಹಿದೀನ್ ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT