ಗುರುವಾರ , ಏಪ್ರಿಲ್ 2, 2020
19 °C

ಒಂದೇ ಕುಟುಂಬದ ನಾಲ್ಕು ಮಂದಿಯ ನಿಗೂಢ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಘಾಜಿಯಾಬಾದ್: ಒಂದೇ ಕುಟುಂಬದ ನಾಲ್ಕು ಮಂದಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ ಘಾಜಿಯಾಬಾದ್‌ನಲ್ಲಿ ನಡೆದಿದ್ದು ಶುಕ್ರವಾರ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಅರ್ಥಲಾದ ಸಂಜಯ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಧೀರಜ್ ತ್ಯಾಗಿ ಎಂಬುವರ ಶವ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದೇ ಮನೆಯಲ್ಲಿ ಅವರ ಪತ್ನಿ ಹಾಗೂ ಎರಡು ವರ್ಷ, ನಾಲ್ಕು ವರ್ಷದ ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ.

ಬೆಳಗ್ಗೆ ಮನೆಯಿಂದ ಯಾರೂ ಹೊರಬರದ ಕಾರಣ ಅಕ್ಕಪಕ್ಕದವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆಯೊಳಗೆ ಪ್ರವೇಶಿಸಿ ನೋಡಿದಾಗ ಸಾವಿಗೀಡಾಗಿರುವುದು ಕಂಡು ಬಂದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನಾಲ್ಕು ಶವಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶವಪರೀಕ್ಷೆ ನಡೆದ ನಂತರ ಸಾವಿನ ಕಾರಣಗಳು ತಿಳಿಯಲಿವೆ ಎಂದು ಘಾಜಿಯಾಬಾದ್ ಎಸ್ಪಿ ಎಂ.ಕೆ.ಸಿಂಗ್ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು