ಗುರುವಾರ , ಸೆಪ್ಟೆಂಬರ್ 24, 2020
21 °C

ಐಟಿ: ಬ್ಯಾಂಕ್‌ ವಂಚನೆ ಸಾಕ್ಷ್ಯ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ಗೆ ₹ 59.35 ಕೋಟಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು, ದೆಹಲಿ ಸೇರಿದಂತೆ ಹತ್ತು ಕಡೆಗಳಲ್ಲಿ ಮಂಗಳವಾರ ಶೋಧ ನಡೆಸಿ ದಾಖಲೆಗಳನ್ನು ವಶಪಡಿಸಿ
ಕೊಂಡಿದ್ದಾರೆ.

ಶ್ರೀನಗರದ ಎಂಟು ಕಡೆಗಳಲ್ಲಿ ಮತ್ತು ದೆಹಲಿ ಮತ್ತು ಬೆಂಗಳೂರಿನ ತಲಾ ಒಂದು ಕಡೆ ಶೋಧ ನಡೆಸಲಾಗಿದೆ.

ಅಕ್ರಮದಲ್ಲಿ ಬ್ಯಾಂಕ್‌ ಅಧಿಕಾರಿ ಶಾಮೀಲಾಗಿರುವುದನ್ನು ದೃಢಪಡಿಸುವಂಥ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು