ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ, ಹಡಗುಗಳಲ್ಲಿ ಇಂಟರ್‌ನೆಟ್‌ ಸೇವೆ

Last Updated 19 ಅಕ್ಟೋಬರ್ 2018, 19:47 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಗಡಿ ಪ್ರದೇಶದ ವ್ಯಾಪ್ತಿ ಒಳಗೆ ಮಾತ್ರ ವಿಮಾನ ಮತ್ತು ಹಡಗುಗಳಲ್ಲಿ ಇಂಟರ್‌ನೆಟ್‌ ಸೇವೆ ಒದಗಿಸಲು ಸರ್ಕಾರ ಉದ್ದೇಶಿಸಿದೆ.

ಅಭಿವೃದ್ಧಿಶೀಲ ರಾಷ್ಟ್ರಗಳ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಹ ಈ ಸೇವೆ ಒದಗಿಸುವ ಉದ್ದೇಶ ಹೊಂದಿದೆ. ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಗ್ರವಾಗಿ ಪರಿಶೀಲಿಸಿದ ನಂತರವೇ ಧ್ವನಿ ಸೇವೆ ಒದಗಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ದೂರಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಮಾನಗಳಲ್ಲಿ ದತ್ತಾಂಶ ಸೇವೆ ಪಡೆಯಲು ಗೃಹ ಇಲಾಖೆ ಅವಕಾಶ ನೀಡಿದೆ. ಆದರೆ, ಧ್ವನಿ ಸೇವೆ ಒದಗಿಸಲು ಆಕ್ಷೇಪಗಳನ್ನು ವ್ಯಕ್ತಪಡಿಸಿದೆ. ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಜಾಗತಿಕವಾಗಿ ಹಲವು ಏರ್‌ಲೈನ್ಸ್‌ಗಳು ಪ್ರಯಾಣಿಕರಿಗೆ ವೈ–ಫೈ ಸೌಲಭ್ಯ ಒದಗಿಸಿವೆ. ಆದರೆ, ಭಾರತೀಯ ವಾಯು ಪ್ರದೇಶವನ್ನು ಪ್ರವೇಶಿಸಿದಾಗ ವೈ–ಫೈ ಸೌಲಭ್ಯವನ್ನು ಸ್ವಿಚ್ಡ್‌ ಆಫ್‌ ಮಾಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT