ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ

ಸೋಮವಾರ, ಮಾರ್ಚ್ 25, 2019
21 °C
ಪಾಕ್‌ ಪಡೆಗಳಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ

Published:
Updated:

ಜಮ್ಮು: ಕದನ ವಿರಾಮವನ್ನು ಮತ್ತೆ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಪಡೆಗಳು, ಗಡಿ ನಿಯಂತ್ರಣ ರೇಖೆ ಬಳಿಯ ರಜೌರಿ ಜಿಲ್ಲೆಯ ಗ್ರಾಮಗಳನ್ನು ಹಾಗೂ ಗಡಿ ಠಾಣೆಗಳನ್ನು ಗುರಿಯಾಗಿಸಿ ಮಂಗಳವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ರಕ್ಷಣಾ ಇಲಾಖೆ ವಕ್ತಾರ ತಿಳಿಸಿದ್ದಾರೆ.

ನೌಶೇರಾ ಸೆಕ್ಟರ್‌ನಲ್ಲಿ ಈ ದಾಳಿ ನಡೆದಿದ್ದು, ಭಾರತ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ. ಯಾವುದೇ ಸಾವು–ನೋವು ಸಂಭವಿಸಿಲ್ಲ. ಗುಂಡಿನ ದಾಳಿ ಮುಂದುವರಿದಿದೆ ಎಂದು ಹೇಳಿದ್ದಾರೆ.

ಬಾಲಾಕೋಟ್‌ನ ಜೈಷ್‌ ಎ ಮೊಹಮ್ಮದ್‌ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆದ ನಂತರ, ರಜೌರಿ ಮತ್ತು ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ನಿರಂತರವಾಗಿ ಮುಂದುವರಿದಿದೆ. ಈವರೆಗೆ ಅಂದಾಜು 60 ಬಾರಿ ಉಲ್ಲಂಘನೆಯಾಗಿದೆ. ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !